image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿ ನೇಮಕಾತಿ: ಅರ್ಜಿ ಆಹ್ವಾನ

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿ ನೇಮಕಾತಿ: ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯ ೭ ಶೈಕ್ಷಣಿಕ ಬ್ಲಾಕ್‌ಗಳಿಗೆ 2026-27ನೇ ಸಾಲಿಗೆ ತಾಲೂಕಿಗೆ ಒಬ್ಬರಂತೆ ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ (Academic Resource Person for Mental Health) ಹುದ್ದೆಗಳಿಗೆ ಸಮಾಲೋಚಕರ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಫೆಬ್ರವರಿ ೨೦೨೭ ರವರೆಗೆ ಇರಲಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ ೨೫ ರೊಳಗೆ ಮಂಗಳೂರಿನ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಟ್ಟಡದ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಉಪನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ