ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ (RSETI) ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಹಾಗೂ ಕರ್ನಾಟಕ ಸರ್ಕಾರದ 'ಸಂಜೀವಿನಿ-KSRLPS' ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯಲ್ಲಿ ಸೆಪ್ಟೆಂಬರ್ 28 ರಿಂದ ತರಬೇತಿ ಪ್ರಾರಂಭವಾಗಲಿದೆ.
ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವರ್ಷ ವಯಸ್ಸಿನ ಸ್ವಯಂ ಉದ್ಯೋಗಾಕಾಂಕ್ಷಿ ನಿರುದ್ಯೋಗಿ ಮಹಿಳೆಯರು ಈ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳಿಗೆ ಕನ್ನಡ ಓದಲು ಹಾಗೂ ಬರೆಯಲು ತಿಳಿದಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ (BPL) ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಯೊಂದಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಅಧಿಕೃತ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 28/09/2026 ರ ಸೋಮವಾರ ಬೆಳಿಗ್ಗೆ 9:30 ಕ್ಕೆ ಅಗತ್ಯ ವಿದ್ಯಾರ್ಹತೆ ಹಾಗೂ ವಿಳಾಸದ ದಾಖಲಾತಿಗಳೊಂದಿಗೆ "ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ" ಇಲ್ಲಿಗೆ ನೇರವಾಗಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 8970476050, 9591514154, 9886935603, 6363139123, 9686248369 ಅನ್ನು ಸಂಪರ್ಕಿಸಬಹುದು.