ಶಿವಮೊಗ್ಗ ವನ್ಯಜೀವಿ ವಿಭಾಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಶುವೈದ್ಯರೊಬ್ಬರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಲಾಗಿದೆ.
ಬಿ.ವಿ.ಎಸ್ಸಿ ಮತ್ತು ಎ.ಎಚ್ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 17ರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ವನ್ಯಜೀವಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಅನುಭವವಿರುವವರಿಗೆ ಮುಂಚೂಣಿ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ https://sakrebailuelephantcamp.org/ ವೆಬ್‌ಸೈಟ್ ಸಂಪರ್ಕಿಸಬಹುದು.