ಮಂಗಳೂರು : ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿನ ಸಮಿತಿಯು ಅರ್ಹರನ್ನು ಆಯ್ಕೆ ಮಾಡಲಿದ್ದು, ಡಿಸೆಂಬರ್ 3 ರಂದು ನಡೆಯಲಿರುವ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಮಂಗಳೂರಿನ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಟ್ಟಡದ 'ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ'ಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 7 ರ ಒಳಗೆ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2455999 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.