image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಇದೇ ನವೆಂಬರ್ 30ರಿಂದ 12 ದಿನಗಳ ಕಾಲ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿಯಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಫ್ರೈಡ್ ರೈಸ್ ಹಾಗೂ ಸಮೋಸ ಸೇರಿದಂತೆ ವಿವಿಧ ಚಾಟ್ಸ್ ತಯಾರಿಕೆಯ ಕುರಿತು ಪ್ರಾಯೋಗಿಕವಾಗಿ ಹೇಳಿಕೊಡಲಾಗುವುದು.

ಸ್ವ-ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವರ್ಷದೊಳಗಿನ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಈ ಶಿಬಿರದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸೌಲಭ್ಯವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರಲಿದೆ. ತರಬೇತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಇದೇ ನವೆಂಬರ್ 25ರ ಬುಧವಾರ ಬೆಳಿಗ್ಗೆ 9.30ಕ್ಕೆ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲಾತಿಗಳೊಂದಿಗೆ ಸೊಣ್ಣಹಳ್ಳಿಪುರದ (ಹಸಿಗಾಳ ಅಂಚೆ, ಹೊಸಕೋಟೆ ತಾಲ್ಲೂಕು) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಒಂದು ವೇಳೆ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ನವೆಂಬರ್ 25ರೊಳಗೆ 8970476050, 9591514154, 9686248369, 6363139123 ಅಥವಾ 9886935603 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Category
ಕರಾವಳಿ ತರಂಗಿಣಿ