image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

‘ಆಳ್ವಾಸ್ ಯುವಸಿರಿ-2027’ ಅಧ್ಯಕ್ಷರ ಆಯ್ಕೆಗೆ ಅರ್ಜಿ ಆಹ್ವಾನ

‘ಆಳ್ವಾಸ್ ಯುವಸಿರಿ-2027’ ಅಧ್ಯಕ್ಷರ ಆಯ್ಕೆಗೆ ಅರ್ಜಿ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜನವರಿ 9ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ‘ಆಳ್ವಾಸ್ ಯುವಸಿರಿ-2027’ ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಭಾಷಣ, ಸಾಹಿತ್ಯ ರಚನೆ ಹಾಗೂ ವಿಶಿಷ್ಟ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ತಮ್ಮ ಸ್ವಪರಿಚಯ, ಪ್ರಮಾಣಪತ್ರಗಳು, ಸಂಪರ್ಕ ಸಂಖ್ಯೆ ಮತ್ತು ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರದೊಂದಿಗೆ ನವೆಂಬರ್ 25ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಡಿಸೆಂಬರ್ ಮೊದಲ ವಾರದಲ್ಲಿ ವಿದ್ಯಾಗಿರಿ ಆವರಣದಲ್ಲಿ ಬರಹ, ಆಶುಭಾಷಣ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷತೆ ಸೇರಿದಂತೆ ಯುವ ಉಪನ್ಯಾಸ, ಕವನ ವಾಚನ ಮತ್ತು ಕಲಾ ಅಭಿವ್ಯಕ್ತಿಗೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ‘ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.), ಮೂಡುಬಿದಿರೆ – 574227, ದ.ಕ.’ ವಿಳಾಸಕ್ಕೆ ಅಥವಾ info@alvas.org ಇಮೇಲ್ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9845714371 ಅಥವಾ 8310445081 ಸಂಖ್ಯೆಯನ್ನು ಸಂಪರ್ಕಿಸಬಹುದು.

Category
ಕರಾವಳಿ ತರಂಗಿಣಿ