ಮಂಗಳೂರು - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು ಕನ್ನಡ ಹಾಗೂ ಆಂಗ್ಲ ಭಾಷೆ(ಮಾತು ಹಾಗೂ ಬರವಣಿಗೆ)ಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಟೆಕ್ನಾಲಜಿ ಹಾಗೂ ಸಾಫ್ಟ್‍ವೇರ್ ಅಪ್ಲಿಕೇಷನ್‍ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು. ವಯೋಮಿತಿ 21 ವರ್ಷದಿಂದ 35 ವರ್ಷದೊಳಗಿನವರಾಗಿರಬೇಕು. ಮಾಸಿಕ ರೂ. 20 ಸಾವಿರ ಗೌರವಧನ ನೀಡಲಾಗುತ್ತದೆ.
ಆಸಕ್ತರು ಮಾರ್ಚ್ 2 ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಉರ್ವ ಮಾರ್ಕೆಟ್ ಕಟ್ಟಡದ 3ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.