image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಯು.ಪಿ.ಎಸ್.ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಯು.ಪಿ.ಎಸ್.ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಗೆ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನವಾಗಿದೆ.

ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿದ ಹಾಗೂ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 5 ಲಕ್ಷದೊಳಗಿರುವ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯದ ವಿವರಗಳನ್ನು ಮುಂದಿನ ದಿನಗಳಲ್ಲಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸುವುದರಿಂದ ಯಾವುದೇ ಪ್ರತ್ಯೇಕ ತರಬೇತಿ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 8050770004 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ