image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ಕೃಷಿ

ಹವಾಮಾನ ವೈಪರೀತ್ಯದ ಬೆಳೆವಿಮೆ ಯೋಜನೆ : ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ಹವಾಮಾನ ವೈಪರೀತ್ಯದ ಬೆಳೆವಿಮೆ ಯೋಜನೆ : ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿ ಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಯನ್ನು ಸರ್ಕಾರ ಜಾರಿಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗ ಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‌ನಲ್ಲಿ ಹಾಗೂ ಬೆಳೆಸಾಲ ಹೊಂದಿ ಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‌ಗಳಲ್ಲಿ ಯೋಜನೆಯಡಿ ನೋಂದಾಯಿಸ ಬಹುದು. ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮ ಒನ್‌ಗಳ ಮೂಲಕವೂ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸ ಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ ರೂ.6400 ಹಾಗೂ ರೂ.2350ಗಳಾಗಿರುತ್ತದೆ. ಈ ಯೋಜನೆ ಯಡಿ ನೋಂದಣಿಗೊಳ್ಳಲು ಜುಲೈ 31 ಕೊನೆಯ ದಿನ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಸಂಸ್ಥೆಯು ಆಯ್ಕೆಯಾಗಿದೆ.

ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ-9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ- 9449258204, ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, - 9448206393, ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ-9731854527, ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಸುಹಾನ ಪಿ.ಕೆ.- 9880993238, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ - 9131962255 ಸಂಪರ್ಕಿಸಬಹುದು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ