image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೊಲಂಬೊ ಟೆಸ್ಟ್ ಡ್ರಾ: ಭಾರತದ WTC ಫೈನಲ್ ಆಸೆಗೆ ಹಿನ್ನಡೆ

ಕೊಲಂಬೊ ಟೆಸ್ಟ್ ಡ್ರಾ: ಭಾರತದ WTC ಫೈನಲ್ ಆಸೆಗೆ ಹಿನ್ನಡೆ

ಕೊಲಂಬೊ : ಗಾಲೆ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ಟೀಂ ಇಂಡಿಯಾಗೆ ಕೊಲಂಬೊ ಟೆಸ್ಟ್‌ನಲ್ಲಿ ಶ್ರೀಲಂಕಾ ದಿಟ್ಟ ತಿರುಗೇಟು ನೀಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಲಂಕಾ ಬ್ಯಾಟರ್‌ಗಳ ಹೋರಾಟದಿಂದಾಗಿ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿದ್ದು, ಭಾರತದ ಗೆಲುವಿನ ಭರವಸೆ ಹುಸಿಯಾಗಿದೆ. ವಿಶೇಷವಾಗಿ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಸೋನಲ್ ದಿನುಷಾ, ಲಂಕಾ ಪಡೆಯ ರಕ್ಷಣೆಗೆ ನಿಂತು ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಈ ಡ್ರಾದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ರೇಸ್‌ನಲ್ಲಿರುವ ಭಾರತ ತಂಡಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ಪಂದ್ಯ ಗೆದ್ದಿದ್ದರೆ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರುತ್ತಿತ್ತು. ಆದರೆ ಕೊಲಂಬೊ ಟೆಸ್ಟ್ ಡ್ರಾಗೊಂಡಿದ್ದರಿಂದ ಪ್ರಸ್ತುತ 51.32 ರ ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ಐದನೇ ಸ್ಥಾನದಲ್ಲೇ ಮುಂದುವರಿದಿದೆ. ಮತ್ತೊಂದೆಡೆ, ಶ್ರೀಲಂಕಾ 33.33 ರ ಶೇಕಡಾವಾರುವಿನೊಂದಿಗೆ ಆರನೇ ಸ್ಥಾನಕ್ಕೆ ಏರಿದರೆ, ಬಾಂಗ್ಲಾದೇಶ 55.56 ರ ಗೆಲುವಿನ ಶೇಕಡಾವಾರುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಮೊದಲ ಎರಡು ಸ್ಥಾನಗಳಲ್ಲಿದ್ದರೆ, ಪಾಕಿಸ್ತಾನ ಕೊನೆಯ ಸ್ಥಾನದಲ್ಲಿದೆ.

WTC ಫೈನಲ್ ಪ್ರವೇಶಿಸಬೇಕಾದರೆ ಭಾರತಕ್ಕೆ ಇನ್ನುಳಿದ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಟೀಂ ಇಂಡಿಯಾಗೆ ಇನ್ನು 7 ಟೆಸ್ಟ್ ಪಂದ್ಯಗಳು ಬಾಕಿಯಿದ್ದು, ಫೈನಲ್ ಟಿಕೆಟ್ ಪಡೆಯಲು ಕನಿಷ್ಠ 6 ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಿದೆ. ಇದರರ್ಥ ಭಾರತ ಒಂದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ, ಫೈನಲ್ ಸ್ಪರ್ಧೆಯಿಂದ ಅಧಿಕೃತವಾಗಿ ಹೊರಬೀಳಲಿದೆ.

ಮುಂದಿನ ಹಂತದಲ್ಲಿ ಭಾರತ ತಂಡವು ಅಕ್ಟೋಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅವರದ್ದೇ ನೆಲದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ. ನ್ಯೂಜಿಲೆಂಡ್ ನೆಲದಲ್ಲಿ ಗೆಲುವು ಸಾಧಿಸುವುದು ಭಾರತಕ್ಕೆ ಕಠಿಣ ಸವಾಲಾಗಲಿದೆ. ಇದರ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಸುದೀರ್ಘ ಟೆಸ್ಟ್ ಸರಣಿ ಎದುರಾಗಲಿದೆ. ಈ ಏಳು ಪಂದ್ಯಗಳಲ್ಲಿ ಗಿಲ್ ಪಡೆ ಎಷ್ಟು ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಲಗ್ಗೆ ಇಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Category
ಕರಾವಳಿ ತರಂಗಿಣಿ