image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ

ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ

ಮಂಗಳೂರು : ಪಂಜಾಬ್‌ನ ಲೂಧಿಯಾನದ ಗುರುನಾನಕ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 1ರಿಂದ 3ರವರೆಗೆ ನಡೆದ 21ನೇ ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಿ.ಎಂ. ಕೀರ್ತಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 18ರ ವಯೋಮಾನದವರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಜಿ.ಎಂ. ಕೀರ್ತಿ ಅವರು 1.68 ಮೀಟರ್ ಜಿಗಿದು ಪ್ರಥಮ ಸ್ಥಾನ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇವರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ನಿವಾಸಿಗಳಾದ ಮೋನಪ್ಪ ಮತ್ತು ಲಲಿತಾ ದಂಪತಿಯ ಪುತ್ರಿಯಾಗಿದ್ದಾರೆ.

ದೈಹಿಕಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ ಬಾರ್ತಿಕುಮೇರು, ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ಕೀರ್ತಿ ತರಬೇತಿಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಮಿಂಚಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ