ಮಂಗಳೂರು : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮಂಗಳೂರಿನ ಪದುವ ಪದವಿಪೂರ್ವ ಕಾಲೇಜಿನ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಸಾಧನೆಗೈದ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸ್ಪೂರ್ತಿ ಜಿ ಬಲ್ಲಾಲ್, ಸ್ವಪ್ನ, ದ್ವಿತೀಯ ವಿಜ್ಞಾನ ವಿಭಾಗದ ಅನನ್ಯ ಎಸ್ ಹಾಗೂ ಪ್ರಥಮ ಕಲಾ ವಿಭಾಗದ ಎ ಶ್ರೀದೇವಿ ಭಟ್ ಅವರು ಭಾಗವಹಿಸಿದ್ದರು. ಅಲ್ಲದೆ, ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಚನಿಲ ಅವರು ಐದನೇ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳ ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರು ನೇತೃತ್ವ ವಹಿಸಿ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಉನ್ನತ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.