ಮಂಗಳೂರು : ಬ್ಯಾಪ್ಟಿಸ್ಟ್ ಸ್ಪೋರ್ಟ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಮೂಲ ಉದ್ದೇಶ ಹಳ್ಳಿಗಳಲ್ಲಿ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಗಳಿಗೆ ಮೂಲ ಸೌಕರ್ಯವನ್ನು ಒದಗಿಸುವುದು ಹಾಗೂ ಹೆಚ್ಚಿನ ತರಬೇತಿಗೆ ಪ್ರೋತ್ಸಾಹ ನೀಡುವುದಾಗಿದೆ ಎಂದು ಬ್ಯಾಪ್ಟಿಸ್ಟ್ ಸ್ಪೋರ್ಟ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಅರುಣ್ ಬ್ಯಾಪ್ಟಿಸ್ಟ್ ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಾಗೇಯೇ ಪ್ರೋತ್ಸಾಹಧನ ಸಿಗುವಂತೆ ಪ್ರಯತ್ನಿಸುವುದು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಾಗಿದೆ. ಈಗಾಗಲೇ ನಾವು ಹಲವು ಕಾರ್ಯಕ್ರಮಗಳನ್ನು ಮಾಡಿದ್ದೇವೆ ಅದರಲ್ಲಿ ಮುಖ್ಯವಾಗಿ 'ಡ್ರಾಪ್ ಎಂಡ್ ಸರ್ವ್' ಅನ್ನುವ ಕಲ್ಪನೆಯೊಂದಿಗೆ ನಮ್ಮಲ್ಲಿದ್ದ ಚಿಲ್ಲರೆ ಹಣವನ್ನು ಡಬ್ಬಿಯಲ್ಲಿ ಹಾಕಿ ಸಂಗ್ರಹಿಸಿದ ಒಟ್ಟು ಹಣವನ್ನು ಫಲಾನುಭವಿಗಳಿಗೆ ನೀಡಲಾಗಿದೆ. ರಕ್ತದಾನ ಶಿಬಿರವನ್ನು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಿರ್ವಹಿಸಿದ್ದೇವೆ.
ಅಶೋಕ ವಿದ್ಯಾಲಯ ಶಾಲೆಯಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ದಿನದಂದು ಮಕ್ಕಳಿಗೆ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕ್ಷೇತ್ರವನ್ನು ಮುಂದಕ್ಕೆ ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ರಾಜ್ಯೋತ್ಸವದ ಪ್ರಯುಕ್ತ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಾಲಿಬಾಲ್ ಪಂದ್ಯಾಟ ನಡೆಸಲಾಗುತ್ತಿದೆ ಸ್ಪೋರ್ಟ್ಸ್ ಪೌಂಡೇಷನ್ (ರಿ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ, ಉರ್ವಸ್ಟೋರ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 26-10-2024 ರಂದು ಮಂಗಳೂರಿನ ಸರಕಾರಿ ಹಾಗೂ ಅನುದಾನಿತ ಕನ್ನಡ ಮಾಧ್ಯಮಗಳ ಬಾಲಕ ಮತ್ತು ಬಾಲಕಿಯರಿಗೆ ವಾಲಿಬಾಲ್ ಪಂದ್ಯಾಟವು ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ಆಯೋಜಿಸಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. 1ನೇ ತರಗತಿಯಿಂದ 7ನೇ ತರಗತಿಯ ಸರಕಾರಿ. ಅನುದಾನಿತ ಹಾಗೂ ಅನುದಾನ ರಹಿತ (ಕನ್ನಡ ಮಾಧ್ಯಮ) ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದು.
ಕೊನೆಯ ದಿನಾಂಕ 24-10-2024 ಭಾಗವಹಿಸುವ ಪ್ರತಿ ತಂಡಕ್ಕೂ ಒಂದು ವಾಲಿಬಾಲ್ ಅನ್ನು ನೀಡಿ ಪ್ರೋತ್ಸಾಹಿಸಲಾಗುವುದು. ಅಕ್ಟೋಬರ್ 26 ರಂದು ಉದ್ಘಾಟನಾ ಸಮಾರಂಭವು ಬೆಳಿಗ್ಗೆ 9:30 ಗಂಟೆಗೆ ಶ್ರೀ ಪ್ರದೀಪ್ ಡಿಸೋಜ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ನೆರವೇರಲಿದೆ. ಶ್ರೀ ಸುನಿಲ್ ಬಾಳಿಗ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.
ಸಮಾರೋಪ ಸಮಾರಂಭವು 4 ಗಂಟೆಗೆ ಶ್ರೀಮತಿ ಲಿಲ್ಲಿ ಪಾಯ್ಸ್ ಅಧ್ಯಕ್ಷರು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಶ್ರೀ ಎವರೆಸ್ಟ್ ಪಿಂಟೊ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಬಹುಮಾನ ವಿತರಣೆಯನ್ನು ಮಾಡಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಫ್ರಾನ್ಸಿಸ್, ಸುನಿತಾ ಅಂಚನ್, ಉದಯ ಆಚಾರ್ಯ, ಪ್ರದೀಪ್ ಡಿಸೋಜಾ ಗಣೇಶ್, ಸತೀಶ್ ಎಸ್ ಉಪಸ್ಥಿತರಿದ್ದರು.