image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧಾನ

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧಾನ

ಮಂಗಳೂರು : ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಧಡಿಪಟಾಲ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಐತಿಹಾಸಿಕ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆದ ಏಷ್ಯನ್ ಗೇಮ್ಸ್ ಸೆಮಿಫೈನಲ್ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಮಂಧಾನ, ಕೇವಲ 19 ಎಸೆತಗಳಲ್ಲಿ 37 ರನ್ ಗಳಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು.

ಇದಕ್ಕೂ ಮುನ್ನ ನ್ಯೂಝಿಲೆಂಡ್‌ನ ಸುಝಿ ಬೇಟ್ಸ್ 178 ಇನಿಂಗ್ಸ್‌ಗಳಲ್ಲಿ 4,758 ರನ್ ಗಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಟೀಮ್ ಇಂಡಿಯಾ ಪರ 171 ಇನಿಂಗ್ಸ್ ಆಡಿರುವ ಸ್ಮೃತಿ ಮಂಧಾನ ಒಟ್ಟು 4,765 ರನ್ ಗಳಿಸುವ ಮೂಲಕ ಸುಝಿ ಬೇಟ್ಸ್ ಅವರ ಸುದೀರ್ಘಾವಧಿಯ ದಾಖಲೆಯನ್ನು ಮುರಿದು ಪ್ರಥಮ ಸ್ಥಾನಕ್ಕೇರಿದ್ದಾರೆ. ಈ ಪ್ರಮುಖ ಸಾಧನೆಯೊಂದಿಗೆ ಸ್ಮೃತಿ ಮಂಧಾನ ಮತ್ತೊಂದು ಅಪರೂಪದ ಮೈಲಿಗಲ್ಲಿನ ಹತ್ತಿರದಲ್ಲಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಇನ್ನು 235 ರನ್ ಕಲೆಹಾಕಿದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 5,000 ರನ್ ಪೂರೈಸಿದ ಜಗತ್ತಿನ ಏಕೈಕ ಬ್ಯಾಟರ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Category
ಕರಾವಳಿ ತರಂಗಿಣಿ