ಮಂಗಳೂರು : ಚಾಮರಾಜನಗರದ ಜನಸೇವ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ವಿಜೇತ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಮೋಕ್ಷಿತ್ ಕೆ, ಲಿಖಿತ್ ಎನ್, ಪ್ರಜ್ವಲ್, ಚಂದನ್, ಶಶಾಂಕ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಾನ್ವಿತ್, ಸಾತ್ವಿಕ್, ಕೀರ್ತನ್, ಲಿಖಿತ್, ಘನಶ್ಯಾಮ್, ದೇಶ್ಚಿತ್ ಮತ್ತು ತರುಣ್ ಕುಮಾರ್ ಬಿ.ಆರ್. ಭಾಗವಹಿಸಿದ್ದರು.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಪಡೆದುಕೊಂಡಿತ್ತು. ಪಂದ್ಯಾಟದಲ್ಲಿ ಉತ್ತಮ ಸಾಧನೆ ತೋರಿದ ಕಾಲೇಜಿನ ತಂಡವನ್ನು ಹಾಗೂ ತರಬೇತಿ ನೀಡಿದ ಶಿಕ್ಷಕರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.