image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಕಾಲೇಜಿನ ಖುಷಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಕಾಲೇಜಿನ ಖುಷಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಬೆಂಗಳೂರಿನ ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ವಿಶೇಷ ತರಬೇತಿಯನ್ನು ಪಡೆದಿದ್ದರು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಖುಷಿ ಕೆ. ಎಂ ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ