image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್: ವಿವೇಕಾನಂದ ಕಾಲೇಜು ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್: ವಿವೇಕಾನಂದ ಕಾಲೇಜು ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಬೆಂಗಳೂರಿನ ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಇದೇ ಪಂದ್ಯಾಟದಲ್ಲಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಎಚ್. ಮನ್ನಿತಾ, ಆತ್ಮಿಕಾ ಹಾಗೂ ಶರಣ್ಯ ಎಚ್. ಎನ್. ಭಾಗವಹಿಸಿದ್ದರು. ದ್ವಿತೀಯ ಸ್ಥಾನ ಪಡೆದ ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಕೆ. ವಿ. ನಿಖಿಲ್ ಕುಮಾರ್ ಮತ್ತು ದ್ವಿತೀಯ ಪಿಯುಸಿಯ ಅಭಿಲಾಷ್ ಬಿ. ಭಾಗವಹಿಸಿದ್ದರು.

ಈ ವಿದ್ಯಾರ್ಥಿಗಳ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿ ಪಡೆದುಕೊಂಡಿದೆ. ವಿಜೇತ ಹಾಗೂ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ