image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್ ಕಾಲೇಜಿಗೆ 18ನೇ ಬಾರಿಗೆ ಮಂಗಳೂರು ವಿವಿ ಕಬಡ್ಡಿ ಚಾಂಪಿಯನ್ ಪಟ್ಟ

ಆಳ್ವಾಸ್ ಕಾಲೇಜಿಗೆ 18ನೇ ಬಾರಿಗೆ ಮಂಗಳೂರು ವಿವಿ ಕಬಡ್ಡಿ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ತಂಡವು ವೆರಿ ರೆವರೆಂಡ್ ಫಾದರ್ ಪತ್ರಾವೋ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು 18ನೇ ಬಾರಿಗೆ ತನ್ನದಾಗಿಸಿಕೊಂಡಿದೆ.

ಸೆಮಿಫೈನಲ್ ಪಂದ್ಯಗಳಲ್ಲಿ ಆಳ್ವಾಸ್ ತಂಡವು ಮಂಗಳೂರು ವಿ.ವಿ. ಕ್ಯಾಂಪಸ್ ಕೊಣಾಜೆ ತಂಡವನ್ನು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ತಂಡವು ಪುತ್ತೂರಿನ ವಿವೇಕಾನಂದ ಕಾಲೇಜು ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ್ದವು. ಫೈನಲ್ ಪಂದ್ಯದಲ್ಲಿ ಆಳ್ವಾಸ್ ಕಾಲೇಜು ತಂಡವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ತಂಡವನ್ನು ಪರಾಭವಗೊಳಿಸಿ ಶಾಶ್ವತ ಫಲಕ ಹಾಗೂ ಪಾರಿತೋಷಕವನ್ನು ವಶಪಡಿಸಿಕೊಂಡಿತು.

ಆಳ್ವಾಸ್ ತಂಡದ ಅನ್ನಪೂರ್ಣ 'ಉತ್ತಮ ಹಿಡಿತಗಾರ್ತಿ' ಹಾಗೂ ಭಾರತಿ ದೇವಾಡಿಗ 'ಉತ್ತಮ ದಾಳಿಗಾರ್ತಿ' ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಜಯ ಸಾಧಿಸಿದ ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ