ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಜಂಟಿ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡವು ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದೆ.
ಪಂದ್ಯಾಟದ ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಕಿಶನ್ ಕೆ. ವೈ., ತ್ರಿಶಿಕ್ ಕೆ. ಗೌಡ, ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ. ಜೆ., ಅನ್ವಿತ್ ಎಸ್. ಪಿ., ನಿಧೀಶ್ ಶೆಟ್ಟಿ, ಮನ್ವಂತ್ ಹಾಗೂ ದ್ವಿತೀಯ ಪಿಯುಸಿಯ ಪ್ರಣಮ್ ಪಿ. ಶೆಟ್ಟಿ, ಚಿಂತನ್ ಕೆ. ಮತ್ತು ಕೆ. ಆರ್. ದಿಶಾಂತ್ ಭಾಗವಹಿಸಿದ್ದರು. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿಯ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್., ಧರಣಿ ಕೆ. ಟಿ., ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್., ತನ್ವಿ ಮತ್ತು ದ್ವಿತೀಯ ಪಿಯುಸಿಯ ಧನ್ವಿ ಎ. ಆರ್. ಪ್ರತಿನಿಧಿಸಿದ್ದರು.
ಸದರಿ ತಂಡಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದವು. ಈ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮುಕ್ತಕಂಠದಿಂದ ಅಭಿನಂದಿಸಿದ್ದಾರೆ.