ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವುಗಳ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್. ಮತ್ತು ಯಶಸ್ ಎಚ್. ಸಿ. ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಗಗನ್ ಕೆ.ಎನ್., ತೇಜಸ್ ಟಿ. ಆರ್., ಜಶ್ವಂತ್ ಗೌಡ, ಧನುಷ್ ಕೆ. ಎಚ್. ಮತ್ತು ಆಕಾಶ್ ಭಾಗವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ಮಾರ್ಗದರ್ಶನ ಹಾಗೂ ತರಬೇತಿಯಲ್ಲಿ ತಂಡವು ಈ ಸಾಧನೆ ಮಾಡಿದೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ತರಬೇತುದಾರರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದ ಅಭಿನಂದಿಸಿದೆ.