ಹೈದರಾಬಾದ್ : ಹೈದರಾಬಾದ್ನಲ್ಲಿ ನಡೆದ ರೋಚಕ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ 24 ರನ್ಗಳ ಗೆಲುವು ಸಾಧಿಸಿರುವ ವೆಸ್ಟ್ ಇಂಡೀಸ್ ತಂಡ, 5 ಪಂದ್ಯಗಳ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸಿದೆ. ಈ ಗೆಲುವಿನೊಂದಿಗೆ ವಿಂಡೀಸ್ ಪಡೆ ಭಾರತದಲ್ಲಿ ಒಂದೇ ಪ್ರವಾಸದಲ್ಲಿ ಮೂರು ಪಂದೕಗಲನ್ನು ಗೆದ್ದು 24 ವರ್ಷಗಳ ಬಳಿಕ ಐತಿಹಾಸಿಕ ಸಾಧನೆ ಮಾಡಿದೆ. ಕೊನೆಯ ಬಾರಿ 2002ರಲ್ಲಿ ವೆಸ್ಟ್ ಇಂಡೀಸ್ ಭಾರತದಲ್ಲಿ ಈ ರೀತಿಯ ಯಶಸ್ಸು ಕಂಡಿತ್ತು. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದ ವಿಂಡೀಸ್ ನಾಯಕ ಶಾಯ್ ಹೋಪ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸರಣಿಯ ನಿರ್ಣಾಯಕ ಹಾಗೂ ಐದನೇ ಅಂತಿಮ ಟಿ20 ಪಂದ್ಯವು ಅಕ್ಟೋಬರ್ 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.