ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-2026 ಅನ್ನು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುವ ಪೀಳಿಗೆಯ ಆರೋಗ್ಯಕ್ಕೆ ಕ್ರೀಡೆ ಅತ್ಯಂತ ಅನಿವಾರ್ಯ ಹಾಗೂ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕಿ ಮಹಾಲಕ್ಷ್ಮಿ ಮಾತನಾಡಿ, ಗೆಲುವೊಂದೇ ಕ್ರೀಡೆಯ ಅಂತಿಮ ಗುರಿಯಲ್ಲ, ಬದಲಿಗೆ ಸಕ್ರಿಯವಾಗಿ ಪಾಲ್ಗೊಳ್ಳುವುದು ಅತ್ಯಂತ ಪ್ರಮುಖವಾದುದು ಎಂದು ತಿಳಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾದ ಪಥಸಂಚಲನ ನಡೆಸಿದರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿ ಉದ್ಘಾಟelರಿಗೆ ಹಸ್ತಾಂತರಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್. ಅವರ ಮಾರ್ಗದರ್ಶನದಲ್ಲಿ ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಕೆಮ್ಮಿಂಜೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ದೇವಿಚರಣ್ ರೈ ಎಂ, ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಬಿ., ಡಾ. ಜ್ಯೋತಿಕುಮಾರಿ ಪಿ.ಸಿ. ಸೇರಿದಂತೆ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಜತೆಕಾರ್ಯದರ್ಶಿ ಡಿಂಪಲ್ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಮನ್ವಿತ್ ವಂದಿಸಿದರು ಹಾಗೂ ಉಪನ್ಯಾಸಕ ಪಿ. ಕೆ. ಪರಮೇಶ್ವರ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು.