image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟವು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕೆನರಾ ಕಾಲೇಜು, ಮಂಗಳೂರು ಇಲ್ಲಿನ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕರಾದ ಕಾರ್ತಿಕ್ ಎನ್ ಅವರು ಪಂದ್ಯಾಟವನ್ನು ಉದ್ಘಾಟಿಸಿ, ಖೋ ಖೋ ಕೇವಲ ಮನರಂಜನೆಯ ಆಟವಲ್ಲದೆ, ದೈಹಿಕ ಆರೋಗ್ಯ, ಮಾನಸಿಕ ಚುರುಕುತನ, ಶಿಸ್ತು, ಸಹಕಾರ ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಅತ್ಯುತ್ತಮ ಕ್ರೀಡೆಯಾಗಿದೆ ಎಂದು ತಿಳಿಸಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಮುರಳಿಕೃಷ್ಣ ರೈ ಅವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹಾಗೂ ಶ್ರೀಮತಿ ದಯಾಮಣಿ ಉಪಸ್ಥಿತರಿದ್ದರು. ಪಂದ್ಯಾಟದಲ್ಲಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ವಿದ್ಯಾರ್ಥಿಗಳಾದ ತರುಣ್ ಕುಮಾರ್ ಬಿ. ಆರ್., ಸಾತ್ವಿಕ್ ಹಾಗೂ ದೇಶ್ಚಿತ್ ಯಸ್ ಅವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಪಟುಗಳಿಗೆ ಪವನ್ ಕುಮಾರ್ ಅವರು ತರಬೇತಿ ನೀಡಿದ್ದರು.

Category
ಕರಾವಳಿ ತರಂಗಿಣಿ