image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಹುಲ್ ತ್ರಿಪಾಠಿ ಸ್ಫೋಟಕ ಅರ್ಧಶತಕದ ಹೊರತಾಗಿಯೂ ಭಾರತಕ್ಕೆ 3 ರನ್‌ಗಳ ರೋಚಕ ಸೋಲು

ರಾಹುಲ್ ತ್ರಿಪಾಠಿ ಸ್ಫೋಟಕ ಅರ್ಧಶತಕದ ಹೊರತಾಗಿಯೂ ಭಾರತಕ್ಕೆ 3 ರನ್‌ಗಳ ರೋಚಕ ಸೋಲು

ಹಾಂಗ್ ಕಾಂಗ್‌ : ಹಾಂಗ್ ಕಾಂಗ್‌ನ ಮೌಂಗ್ ಕಾಕ್‌ನ ಮಿಷನ್ ರೋಡ್ ಗ್ರೌಂಡ್‌ನಲ್ಲಿ ನಡೆದ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 3 ರನ್‌ಗಳ ಅಂತರದಿಂದ ಪರಾಭವಗೊಂಡು ಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತದ ನಾಯಕ ಕೃನಾಲ್ ಪಾಂಡ್ಯ ನಿರ್ಧಾರಕ್ಕೆ ಪ್ರತಿಯಾಗಿ ಇಂಗ್ಲೆಂಡ್‌ನ ಮಾರ್ಟಿನ್ ಆಂಡರ್ಸನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು ಕೇವಲ 13 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಬೌಂಡರಿಗಳ ನೆರವಿನಿಂದ 51 ರನ್ ಗಳಿಸಿದರೆ, ಎಡ್ ಬರ್ನಾರ್ಡ್ 14 ಎಸೆತಗಳಲ್ಲಿ 35 ರನ್ ಕಲೆಹಾಕಿದರು. ಇಂಗ್ಲೆಂಡ್ ನಿಗದಿತ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು.

​125 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಟಗಾರ ನಿತೀಶ್ ರಾಣಾ (4) ಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅಬ್ಬರಿಸಿದರು. ರಾಹುಲ್ 14 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 2 ಫೋರ್‌ಗಳೊಂದಿಗೆ ಅಜೇಯ 56 ರನ್ ಸಿಡಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ನಾಯಕ ಕೃನಾಲ್ ಪಾಂಡ್ಯ 7 ಎಸೆತಗಳಲ್ಲಿ 28 ರನ್ ಚಚ್ಚಿದರು. ಅಂತಿಮ ಓವರ್‌ನಲ್ಲಿ 18 ರನ್‌ಗಳ ಅಗತ್ಯವಿದ್ದಾಗ ಭಾರತ ತಂಡ 14 ರನ್‌ಗಳಷ್ಟನ್ನೇ ಕಲೆಹಾಕಲು ಶಕ್ತವಾಗಿ 121/4 ರನ್ ಗಳಿಸಿ ಅಲ್ಪ ಅಂತರದಲ್ಲಿ ಸೋಲೊಪ್ಪಿಕೊಂಡಿತು.

Category
ಕರಾವಳಿ ತರಂಗಿಣಿ