ಶಿವಮೊಗ್ಗ: ಕೇರಳದ ಕಣ್ಣೂರಿನಲ್ಲಿ ಇತ್ತೀಚೆಗೆ ನಡೆದ ಸೌತ್ ಇಂಡಿಯಾ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಶಿವಮೊಗ್ಗದ ಕ್ರೀಡಾಪಟು ಫಾಜಿಲ್ ಅದ್ಭುತ ಸಾಧನೆ ಮಾಡಿದ್ದಾರೆ. ಪುರುಷರ ಜೂನಿಯರ್ ವಿಭಾಗದ ೫೯ ಕೆಜಿ ಕೆಟಗರಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರೊಂದಿಗೆ ಟೂರ್ನಿಯ 'ಬೆಸ್ಟ್ ಲಿಫ್ಟರ್ ಆಫ್ ಸೌತ್ ಇಂಡಿಯಾ' ಬಿರುದನ್ನೂ ಮುಡಿಗೇರಿಸಿಕೊಂಡು ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಫಾಜಿಲ್ ಅವರು ಶಿವಮೊಗ್ಗದ ಫಿಟ್ ಕೇರ್ ಜಿಮ್ನಲ್ಲಿ ರಾಷ್ಟ್ರೀಯ ಕ್ರೀಡಾಪಟು ಸಲೀಂ ಎಂ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.