ಪುತ್ತೂರು : ಮಾಲೆಮಾರ್ ಎಸ್ಟೇಟ್ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ತಂಡದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಮನ್ನಿತಾ ಹಾಗೂ ವಿಜ್ಞಾನ ವಿಭಾಗದ ಆತ್ಮಿಕ ಭಾಗವಹಿಸಿದ್ದು, ಇವರಲ್ಲಿ ಮನ್ನಿತಾ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ನೇತೃತ್ವದಲ್ಲಿ ತರಬೇತಿ ನೀಡಲಾಗಿತ್ತು. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.