ಹೈದರಾಬಾದ್ : ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಪುರುಷರ ಟಿ20 ಕ್ರಿಕೆಟ್ ಇತಿಹಾಸದಲ್ಲಿ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಸೌರಾಷ್ಟ್ರ ವಿರುದ್ಧ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ಪಂದ್ಯದಲ್ಲಿ ಬಿಹಾರ ತಂಡವನ್ನು ಮುನ್ನಡೆಸುವ ಮೂಲಕ ಅವರು ಈ ಸಾಧನೆ ಮಾಡಿದರು.
ತಮ್ಮ 15 ವರ್ಷ ಮತ್ತು 232 ದಿನಗಳ ವಯಸ್ಸಿನಲ್ಲಿ ಈ ಮೈಲಿಗಲ್ಲು ಸ್ಥಾಪಿಸಿರುವ ವೈಭವ್, ಕ್ರೊಯೇಷಿಯಾದ ಜಾಕ್ ವುಕುಸಿಕ್ (17 ವರ್ಷ 311 ದಿನ) ಅವರ ಹೆಸინಲ್ಲಿದ್ದ ವಿಶ್ವದಾಖಲೆಯನ್ನು ಹಾಗೂ ಭಾರತದ ಪರ ಮಹಿಪಾಲ್ ಲೊಮ್ರೋರ್ (18 ವರ್ಷ 67 ದಿನ) ಅವರ ದಾಖಲೆಯನ್ನು ಮುರಿದರು. ಸೌರಾಷ್ಟ್ರ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿಹಾರ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ವೈಭವ್ ಸೂರ್ಯವಂಶಿ 12 ಎಸೆತಗಳಲ್ಲಿ 18 ರನ್ ಗಳಿಸಿದರು. ಈ ಗುರಿಯನ್ನು ಬೆನ್ನಟ್ಟಿದ ಸೌರಾಷ್ಟ್ರ ತಂಡವು 16.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಸುಲಭ ಜಯ ಸಾಧಿಸಿತು.