image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌: ವಿವೇಕಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌: ವಿವೇಕಾನಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಮೂಡಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

4x100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಗಳಿಸಿದ್ದು, ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ ಮತ್ತು ದಿವಿಜ್ಞಾ ತಂಡದಲ್ಲಿದ್ದರು. 4x400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ ಹಾಗೂ ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ ಮತ್ತು ಧನ್ವಿ ಪಾಲ್ಗೊಂಡಿದ್ದರು.

ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‌ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗಿತ್ತು. ವಿಜೇತರು ಹಾಗೂ ತರಬೇತುದಾರರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

 

Category
ಕರಾವಳಿ ತರಂಗಿಣಿ