image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ಹೈದರಾಬಾದ್: ಟೀಂ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಬೋಲ್ಡ್ ಆದ ಬೆನ್ನಲ್ಲೇ ಡಬ್ಲ್ಯೂಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. ನಿಗದಿಯಂತೆ ಇನ್ನೂ ಏಳು ಟೆಸ್ಟ್ ಪಂದ್ಯಗಳನ್ನು ಆಡಬೇಕಿರುವ ಆಸ್ಟ್ರೇಲಿಯಾ ಶೇ.62.50 ಅಂಕಗಳೊಂದಿಗೆ ಅಗ್ರ ಸ್ಥಾನಕ್ಕೇರಿದೆ.  58.33 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ 55.56 ಅಂಕಗಳೊಂದಿಗೆ ಮೂರನೇ ಸ್ಥಾನ ಮತ್ತು ಭಾರತ ವಿರುದ್ಧ ಟೆಸ್ಟ್ ಸರಣಿಯ ಗೆಲುವಿನೊಂದಿಗೆ ಕಿವೀಸ್ 54.55 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಮತ್ತು ದಕ್ಷಿಣ ಆಫ್ರಿಕಾ 54.17 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಟೀಂ ಇಂಡಿಯಾ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನಾಡಲಿದೆ. ಇದು ಭಾರತಕ್ಕೆ ಕೊನೆಯ ಸರಣಿಯಾಗಿದೆ. ಈ ಸರಣಿಯಲ್ಲಿ ಭಾರತ ತಂಡವು 4 ಟೆಸ್ಟ್​ ಗೆದ್ದು, ಒಂದನ್ನು ಡ್ರಾ ಮಾಡಿಕೊಂಡರೂ ಅಥವಾ ಒಂದು ಪಂದ್ಯವನ್ನು ಸೋತರೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಕಷ್ಟವಾಗಲಿದೆ ಎಂದು ಕ್ರಿಕೆಟ್​ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

Category
ಕರಾವಳಿ ತರಂಗಿಣಿ