image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತೀರ್ಪು ಗಾರರ ತೀರ್ಮಾನವೇ ಅಂತಿಮ- ಜಿಲ್ಲಾ ಕಂಬಳ ಸಮಿತಿ

ತೀರ್ಪು ಗಾರರ ತೀರ್ಮಾನವೇ ಅಂತಿಮ- ಜಿಲ್ಲಾ ಕಂಬಳ ಸಮಿತಿ

ಮಂಗಳೂರು: ಕಂಬಳದಲ್ಲಿ ತೀರ್ಪುಗಾರರ ನಿರ್ಣಯವೇ ಅಂತಿಮ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆಯಲ್ಲಿ  ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ ಯಜಮಾನರು ಯಾರೂ ಪ್ರಶ್ನಿಸುವಂತಿಲ್ಲ. ಅಸಮಾಧಾನವಿದ್ದರೆ ಅದನ್ನು ಕಂಬಳ ಸಮಿತಿಯ ಗಮನಕ್ಕೆ ತರಬೇಕೇ ಹೊರತು ತೀರ್ಪುಗಾರರನ್ನಲ್ಲ ಎಂದು ಸ್ಪಷ್ಟ ಪಡಿಸಿದರು.

ಕಂಬಳಕ್ಕೆ ರಾಜ್ಯ ಸರಕಾರವು ಮಾನ್ಯತೆ ನೀಡಿದೆ ಅದರಂತೆ ಕೇಂದ್ರ ಸರಕಾರದಲ್ಲೂ ಮಾನ್ಯತೆ ಸಿಗಲು ಕಂಬಳ ಸಮಿತಿಯಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಕಳೆದ ಕಂಬಳ ಋತುವಿನಲ್ಲಿ ರಾಜ್ಯ ಸರಕಾರ ಕಂಬಳಕ್ಕೆ ಅನುದಾನ ನೀಡಿಲ್ಲ. ಈ ಸಲ ಬಜೆಟ್ ಮಂಡನೆ ಸಂದರ್ಭದಲ್ಲಿ ಅನುದಾನ ಮೀಸಲಿಡುವಂತೆ ಜಿಲ್ಲೆಯ ಶಾಸಕರು ಆಗ್ರಹಿಸಬೇಕೆಂದು ಮಂಜುನಾಥ ಭಂಡಾರಿ, ಸುನಿಲ್ ಕುಮಾರ್ ಸಹಿತ ಇತರರ ಬಳಿ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸಮಿತಿಯ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚಾರು, ಗೌರವಾಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್, ಕಾರ್ಯಧ್ಯಕ್ಷ ಕೆ. ಗುಣಪಾಲ ಕಡಂಬ, ಉಪಾಧ್ಯಕ್ಷ ಎನ್. ರಶ್ಮಿತ್ ಶೆಟ್ಟಿ, ಉದಯ ಕೋಟ್ಯಾನ್, ಕೋಶಾಧಿಕಾರಿ ಏರಿಮಾರ್ ಚಂದ್ರಹಾಸ ಸನಿಲ್, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ಕಂಗಿನ ಮನೆ, ಪ್ರಧಾನ ತೀರ್ಪುಗಾರ ರಾಜೀವ ಶೆಟ್ಟಿ ಎಡೂಬ್ಬರು, ಕೋಣಗಳ ಯಜಮಾನರಾದ ನಂದಳಿಕೆ ಶ್ರೀಕಾಂತ್‌ ಭಟ್ ಮುಂತಾದವರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

Category
ಕರಾವಳಿ ತರಂಗಿಣಿ