image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್​ ಡೇ ಟೆಸ್ಟ್​ ಪಂದ್ಯದಲ್ಲಿ ಭಾರತಕ್ಕೆ 184 ರನ್​ಗಳ ಸೋಲು

ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್​ ಡೇ ಟೆಸ್ಟ್​ ಪಂದ್ಯದಲ್ಲಿ ಭಾರತಕ್ಕೆ 184 ರನ್​ಗಳ ಸೋಲು

ಆಸ್ಟ್ರೇಲಿಯಾ : ಬಾರ್ಡರ್ ಗವಾಸ್ಕರ್ ಟ್ರೋಫಿ ಭಾಗವಾಗಿ ಮೆಲ್ಬೋರ್ನ್ ಕ್ರಿಕೆಟ್​ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್​ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲನುಭವಿಸಿದೆ. ಈ ರೋಚಕ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಸಾಂಘಿಕ ಪ್ರದರ್ಶನ ತೋರಿದ್ದರೂ ಅಂತಿಮವಾಗಿ 184ರನ್ ಗಳಿಂದ ಸೋಲನ್ನು ಕಂಡಿದೆ. ಇದರೊಂದಿಗೆ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 228/9 ಓವರ್‌ನೈಟ್ ಸ್ಕೋರ್‌ನೊಂದಿಗೆ ಐದನೇ ದಿನದಾಟವನ್ನು ಪ್ರಾರಂಭಿಸಿ 234 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ನಲ್ಲಿ 105 ರನ್‌ಗಳ ಮುನ್ನಡೆಯೊಂದಿಗೆ ಭಾರತಕ್ಕೆ 340 ರನ್‌ಗಳ ಗುರಿಯನ್ನು ನೀಡಿತು. ಈ ಬೃಹರ್​ ಗುರಿಯನ್ನು ಬೆನ್ನಟ್ಟಿದ ಭಾರತ ಆರಂಭದಲ್ಲಿ ಹಿನ್ನಡೆ ಅನುಭವಿಸಿತು.

ನಾಯಕ ರೋಹಿತ್ ಶರ್ಮಾ (9), ವಿರಾಟ್ ಕೊಹ್ಲಿ (5) ಮತ್ತು ಕೆಎಲ್ ರಾಹುಲ್ (0) ಎರಡನೇ ಇನ್ನಿಂಗ್ಸ್​ನಲ್ಲೂ ವಿಫಲರಾದರು. ಇದರಿಂದಾಗಿ ಭಾರತ ಭೋಜನ ವಿರಾಮದ ವೇಳೆಗೆ 33ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇನ್ನೂ 70 ಓವರ್‌ಗಳು ಬಾಕಿ ಇರುವಾಗಲೇ ಭಾರತ ಸೋಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಹಿರಿಯ ಬ್ಯಾಟ್ಸ್‌ಮನ್‌ಗಳು ವಿಫಲರಾದರೂ ಯುವ ಬ್ಯಾಟರ್​ಗಳಾದ ಯಶಸ್ವಿ ಜೈಶ್ವಾಲ್ ಮತ್ತು ರಿಷಭ್​ ಪಂತ್ ಕಾಂಗರೂ ಪಡೆ ವಿರುದ್ಧ ಹೋರಾಟ ನಡೆಸಿದರು. ಎರಡನೇ ಸೆಷನ್‌ನಲ್ಲಿ ಇಬ್ಬರೂ ಭರ್ಜರಿ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಇದರಿಂದಾಗಿ ಎರಡನೇ ಸೆಷನ್​ನಲ್ಲಿ ಆಸ್ಟ್ರೇಲಿಯಾಗೆ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

Category
ಕರಾವಳಿ ತರಂಗಿಣಿ