image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಇಂದಿನಿಂದ ಮಹಿಳಾ ಪ್ರೀಮಿಯರ್​ ಲೀಗ್​ ಪ್ರಾರಂಭ...

ಇಂದಿನಿಂದ ಮಹಿಳಾ ಪ್ರೀಮಿಯರ್​ ಲೀಗ್​ ಪ್ರಾರಂಭ...

ಹೈದೆರಾಬಾದ್ : ಮಹಿಳಾ ಪ್ರೀಮಿಯರ್​ ಲೀಗ್​ (WPL)ನ 3ನೇ ಆವೃತ್ತಿ ಇಂದಿನಿಂದ ಪ್ರಾರಂಭವಾಗಲಿದೆ. ಕಳೆದ ಸೀಸನ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದ್ದ ಸ್ಮೃತಿ ಮಂಧಾನ ನೇತೃತ್ವದ RCB ಉದ್ಘಾಟನೆ ಪಂದ್ಯದಲ್ಲಿಂದು ಗುಜರಾತ್​ ಜೈಂಟ್ಸ್​ ತಂಡವನ್ನು ಎದುರಿಸಲಿದೆ.

ಉಭಯ ತಂಡಗಳ ನಡುವಿನ ಈ ಪಂದ್ಯವು ಸಂಜೆ 7 ಗಂಟೆಗೆ ವಡೋದರಾ ಮೈದಾನದಲ್ಲಿ ಪ್ರಾರಂಭವಾಗಲಿದೆ. ಆಸ್ಟ್ರೇಲಿಯಾದ ಸ್ಟಾರ್ ಆಟಗಾರ್ತಿ ಆಶ್ಲಿ ಗಾರ್ಡ್ನರ್​ ನಾಯಕತ್ವದಲ್ಲಿ ಗುಜರಾತ್ ಜೈಂಟ್ಸ್ ಕಣಕ್ಕೆ ಇಳಿಯಲಿದೆ. ಒಟ್ಟು ಐದು ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ದೆಹಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ WPL ಪ್ರಶಸ್ತಿಗಾಗಿ ಸ್ಪರ್ಧಿಸಲಿವೆ.

ಪ್ರತಿ ತಂಡವು ಇತರ ತಂಡಗಳ ವಿರುದ್ಧ ಎರಡು ಪಂದ್ಯಗಳನ್ನು ಆಡಲಿವೆ. ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಡಲಿದೆ. ಎರಡನೇ ಮತ್ತು ಮೂರನೇ ಸ್ಥಾನ ಪಡೆದ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಗೆದ್ದ ತಂಡ ಫೈನಲ್‌ಗೆ ತಲುಪಲಿದೆ.

ಈ ಬಾರಿ ಒಟ್ಟು ನಾಲ್ಕು ಸ್ಥಳಗಳಲ್ಲಿ ಫೈನಲ್ ಪಂದ್ಯ ಸೇರಿದಂತೆ ಒಟ್ಟು 22 ಪಂದ್ಯಗಳು ನಡೆಯಲಿವೆ. ವಡೋದರಾದ ಕೋಟಂಬಿ ಕ್ರೀಡಾಂಗಣ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ, ಲಕ್ನೋದ ಏಕಾನಾ ಕ್ರೀಡಾಂಗಣ ಮತ್ತು ಮುಂಬೈನ ಬ್ರಬೋರ್ನ್ ಕ್ರೀಡಾಂಗಣಗಳು WPL ಪಂದ್ಯಗಳಿಗೆ ಆತಿಥ್ಯ ವಹಿಸಿಕೊಳ್ಳಲಿವೆ.

Category
ಕರಾವಳಿ ತರಂಗಿಣಿ