ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ವೇಗಿ, ಮುಂಬೈ ಇಂಡಿಯನ್ಸ್ ಆಟಗಾರ್ತಿ ಶಬ್ನಿಮ್ ಇಸ್ಮಾಯಿಲ್ ಅವರು ಮಹಿಳಾ ಕ್ರಿಕೆಟ್‌ನಲ್ಲಿಯೇ 'ಅತಿ ವೇಗದ ಎಸೆತ'ದಿಂದ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (ಡಬ್ಲ್ಯೂಪಿಎಲ್) ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗಂಟೆಗೆ ೧೩೨.೧ ಕಿ.ಮೀ ವೇಗದಲ್ಲಿ ಶಬ್ನಿಮ್ ಬೌಲಿಂಗ್ ಮಾಡಿದರು. ಅತಿ ವೇಗದ ಬೌಲಿಂಗ್ ಮಾಡುವ ಮೂಲಕ ತಮ್ಮದೇ ಹೆಸರಿನಲ್ಲಿರುವ ದಾಖಲೆಯನ್ನು ಮುರಿದಿದ್ದಾರೆ.