image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಪಂಜಾಬ್​ ಕಿಂಗ್ಸ್​ ತಂಡ 8 ವಿಕೆಟ್​ಗಳಿಂದ ಗೆಲುವು

ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಪಂಜಾಬ್​ ಕಿಂಗ್ಸ್​ ತಂಡ 8 ವಿಕೆಟ್​ಗಳಿಂದ ಗೆಲುವು

ಮುಂಬೈ : ಐಪಿಎಲ್​ನ 13ನೇ ಪಂದ್ಯ ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಪಂಜಾಬ್ ಕಿಂಗ್ಸ್ (PBKS) ಮಧ್ಯೆ ನಡೆಯಿತು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಲಕ್ನೋ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಪಂಜಾಬ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡು ಲಕ್ನೋ ತಂಡಕ್ಕೆ ಬ್ಯಾಟಿಂಗ್​ಗೆ ಆಹ್ವಾನಿಸಿತು. ಆದರೆ ಪಂಜಾಬ್ ಬೌಲರ್​ಗಳ ಅಬ್ಬರಕ್ಕೆ ಲಕ್ನೋ ತಂಡ ಪವರ್ ಪ್ಲೇನಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೂ ನಿಕೋಲಸ್​ ಪೂರನ್​ (44), ಮತ್ತು ಆಯುಷ್​ ಬದೋನಿ (41) ಅವರ ಬ್ಯಾಟಿಂಗ್​ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 171 ರನ್ ಗಳಿಸಿತು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕ ಬ್ಯಾಟರ್​ ಪ್ರಭ್​ ಸಿಮ್ರಾನ್ ಸಿಂಗ್ (61) ಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಡಿದೆದ್ದು ತಂಡಕ್ಕೆ ಗೆಲುವಿನ ಬುನಾದಿ ಹಾಕಿ ನಿರ್ಗಮಿಸಿದರು. ಬಳಿಕ ಬಂದ ನಾಯಕ ಶ್ರೇಯಸ್​ ಅಯ್ಯರ್ (52) ಅರ್ಧಶತಕ ಮತ್ತು ನೆಹಾಲ್ ವದೇರಾ (43) ಅಜೇಯ ಬ್ಯಾಟಿಂಗ್​ ನಿಂದಾಗಿ ಪಂಜಾಬ್​ ತಂಡ 16.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು. ಇದರೊಂದಿಗೆ ಈ ಋತುವಿನಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡಕ್ಕೆ ಅರ್ಶದೀಪ್​ ಸಿಂಗ್ ಆರಂಭದಿಂದಲೇ ಆಘಾತ ನೀಡಿದರು. ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಉರುಳಿಸಿದರು. ನಂತರ ಬಂದ ಮಾರ್ಕ್ರಾಮ್ 28 ರನ್ ಗಳಿಸಿ ನಾಲ್ಕನೇ ಓವರ್‌ನಲ್ಲಿ ಔಟಾದರು.

ಮುಂದಿನ ಓವರ್‌ನಲ್ಲಿಯೇ ಮ್ಯಾಕ್ಸ್‌ವೆಲ್ ಪಂತ್ ಅವರನ್ನು ಔಟ್ ಮಾಡಿದರು. ಪಂತ್ ಕೇವಲ 2 ರನ್ ಗಳಿಸಿ ನಿರ್ಗಮಿಸಿದರು. ಪೂರನ್ ಕೆಲವು ಉತ್ತಮ ಹೊಡೆತಗಳನ್ನು ಆಡಿದರು ಮತ್ತು ಚಹಾಲ್ ಬೌಲಿಂಗ್‌ನಲ್ಲಿ ಔಟಾದರು. 16ನೇ ಓವರ್‌ನಲ್ಲಿ ಡೇವಿಡ್ ಮಿಲ್ಲರ್ 19 ರನ್‌ಗಳ ಇನ್ನಿಂಗ್ಸ್ ಆಡಿ ಪೆವಿಲಿಯನ್​ ಸೇರಿದರು. ಬದೋನಿ ಮತ್ತು ಸಮದ್ ವಿಕೆಟ್​ ಬೀಳುತ್ತಿದ್ದಂತೆ ತಂಡ ಸಾಮಾನ್ಯ ಮೊತ್ತಕ್ಕೆ ಕುಸಿಯಿತು.

Category
ಕರಾವಳಿ ತರಂಗಿಣಿ