ಬರ್ಮಿಂಗ್ ಹ್ಯಾಮ್ : ಇಲ್ಲಿನ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು, ಎರಡನೇ ಟೆಸ್ಟ್ ಪಂದ್ಯದಲ್ಲಿ 336 ರನ್ ಗಳ ಭರ್ಜರಿ ಜಯ ಸಾಧಿಸಿದೆ. 608 ರನ್‌ಗಳ ಸವಾಲಿನ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲವಾದ ಇಂಗ್ಲೆಂಡ್ ಆಕಾಶದೀಪ್ ಅವರ ಮಾರಕ ದಾಳಿಯಿಂದ ನಿರಾಸೆ ಅನುಭವಿಸಿದೆ. ಈ ಮೂಲಕ ಭಾರತ ಆಂಡರ್ಸನ್, ತೆಂಡೂಲ್ಕರ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.ಈ ಮೊದಲು ಲೀಡ್ಸ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 5 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು.
ಆರನೇ ವಿಕೆಟ್‌ಗೆ ಬೆನ್‌ಸ್ಟೋಕ್ಸ್ ಹಾಗೂ ಜೇಮಿ ಸ್ಮಿತ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿಹಾಕುವಲ್ಲಿ ಗಿಲ್ ಪಡೆ ಮಾಡಿಕೊಂಡ ಯೋಜನೆಯಲ್ಲ ಕೈ ಕೊಟ್ಟಿತು. ಈ ಜೋಡಿ ತಂಡಕ್ಕೆ 70 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ವೇಳೆ ಬೆನ್ ಸ್ಟೋಕ್ಸ್ 33 ರನ್ ಬಾರಿಸಿ ಮುನ್ನಗುತ್ತಿದ್ದಾಗ ಔಟ್ ಆದರು. ಇವರಿಗೆ ವಾಷಿಂಗ್ಟನ್ ಸುಂದರ್ ತಮ್ಮ ಕ್ಲಾಸಿಕ್ ಸ್ಪಿನ್ ಮೂಲಕ ಇಂಗ್ಲೆಡ್ ನಾಯಕನಿಗೆ ಕಾಟ ನೀಡಿದರು.
ಟೀಮ್ ಇಂಡಿಯಾ ಬರ್ಮಿಂಗ್ ಹ್ಯಾಮ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದೇ ನಿರಾಸೆಯನ್ನು ಅನುಭವಿಸಿತ್ತು. ಇದೇ ಮೊದಲ ಬಾರಿಗೆ ಭಾರತ ಬರ್ಮಿಂಗ್ ಹ್ಯಾಮ್ ಅಂಗಳದಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಈ ಮೈದಾನದಲ್ಲಿ ಒಂದು ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು. ಈಗ ಗಿಲ್ ಪಡೆ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.
ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್ಟೀತ್ ಬುಮ್ರಾ ಅವರು ಎರಡನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದರು. ಇವರ ಅನುಪಸ್ಥಿತಿ ತಂಡಕ್ಕೆ ಹೆಚ್ಚಾಗಿ ಕಾಡಲೇ ಇಲ್ಲ. ತಂಡದ ಸ್ಟಾರ್ ಬೌಲರ್‌ಗಳು ಸಮಯಕ್ಕೆ ತಕ್ಕಂತೆ ಚೆಂಡನ್ನು ಎಸೆದು ವಿಕೆಟ್ ಪಡೆದರು. ಈ ಮೂಲಕ ಭಾರತದ ಗೆಲುವಿನಲ್ಲಿ ಮಿಂಚಿದರು.