ದುಬೈ: ನೂತನ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನ ಬ್ಯಾಟರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಅನುಭವಿ ಬ್ಯಾಟರ್ ಜೋರೂಟ್ 888 ಪಾಯಿಂಟ್‌ಗಳೊಂದಿಗೆ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಬೌಲರ್ ಹಾಗೂ ಆಿಂಡರ್ ಪಟ್ಟಿಯಲ್ಲಿ ಬೂಮ್ರಾ ಹಾಗೂ ಜಡೇಜ ಅವರು ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಭಾರತದ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 104 ರನ್ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 40 ರನ್ ಗಳಿಸುವ ಮೂಲಕ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಒಂದೇ ವಾರದ ಅಂತರದಲ್ಲಿ ಮರಳಿ ಅಗ್ರಸ್ಥಾನ ಪಡೆದಿದ್ದಾರೆ. 2014ರ ನಂತರ ಟೆಸ್ಟ್ ಬ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಮೊದಲ ಬ್ಯಾಟರ್ ಎನ್ನುವ ಹಿರಿಮೆಗೆ ರೂಟ್ ಪಾತ್ರರಾಗಿದ್ದಾರೆ. ಅದಕ್ಕೂ ಮೊದಲು ಶ್ರೀಲಂಕಾದ ತಾರಾ ಬ್ಯಾಟರ್ ಕುಮಾರ್ ಸಂಗಕ್ಕಾರ ಅವರು 37ನೇ ವಯಸ್ಸಿನಲ್ಲಿ ಟೆಸ್ಟ್ ಬ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು.
ಭಾರತದ ಯಶಸ್ವಿ ಜೈಸ್ವಾಲ್, ಉಪ-ನಾಯಕ ರಿಷಭ್ ಪಂತ್ ಹಾಗೂ ನಾಯಕ ಶುಭಮನ್ ಗಿಲ್ ಅವರು ಟೆಸ್ಟ್ ಬ್ಯಾಂಕಿಂಗ್‌ನಲ್ಲಿ ಕ್ರಮವಾಗಿ ಐದು, ಎಂಟು ಹಾಗೂ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಲಾರ್ಡ್ಸ್ ಟೆಸ್ಟ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಜಡೇಜ ಅವರು ಬ್ಯಾಟಿಂಗ್ ಪ್ಯಾಂಕಿಂಗ್‌ನಲ್ಲಿ ಐದು ಸ್ಥಾನಗಳ ಏರಿಕೆಯೊಂದಿಗೆ 34ನೇ ಸ್ಥಾನದಲ್ಲಿದ್ದಾರೆ. ಅದೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಭಾರಿಸಿದ್ದ ಕೆ.ಎಲ್. ರಾಹುಲ್ ಅವರು 35ನೇ ಸ್ಥಾನಕ್ಕೇರಿದ್ದಾರೆ. ನೂತನ ಐಸಿಸಿ ಟೆಸ್ಟ್ ಯಾಂಕಿಂಗ್‌ನ ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಅವರು 898 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ರಬಾಡಗಿಂತ 47 ಪಾಯಿಂಟ್ ಮುಂದಿದ್ದಾರೆ.
ಆಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜ ಅವರು 409 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಇನ್ನೊಬ್ಬ ಆಂಡರ್ ವಾಷಿಂಗ್ಟನ್ ಸುಂದರ್ ಅವರು 12 ಸ್ಥಾನಗಳ ಏರಿಕೆ ಕಂಡಿದ್ದು, 46ನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ತಂಡಗಳ ಪೈಕಿ 124 ರೇಟಿಂಗ್‌ನೊಂದಿಗೆ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. ಭಾರತವು 105 ರೇಟಿಂಗ್‌ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ವಿರುದ್ಧ ಈಚೆಗೆ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಕರ್ಷಕ ಆಟವಾಡಿದ್ದ (176 ರನ್) ಶಫಾಲಿ ಅವರು, ನಾಲ್ಕು ಸ್ಥಾನ ಬಡ್ತಿ ಪಡೆದು ಒಂಬತ್ತನೇ ಬ್ಯಾಂಕ್‌ಗೇರಿದ್ದಾರೆ. ಮಧ್ಯಮ ಕ್ರಮಾಂಕದ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 14ನೇ ಸ್ಥಾನದಲ್ಲಿದ್ದಾರೆ. ನಾಯಕಿ ಹರ್ಮನ್‌ಪ್ರೀತ್ ಕೌರ್ 15ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಬೌಲಿಂಗ್‌ನಲ್ಲಿ ದೀಪ್ತಿ ಶರ್ಮಾ ಒಂದು ಸ್ಥಾನ ಕುಸಿದು ಮೂರನೇ ಶ್ರೇಣಿಯಲ್ಲಿದ್ದಾರೆ. ರಾಧಾ ಯಾದವ್ ಮೂರು ಸ್ಥಾನ ಬಡ್ತಿ ಪಡೆದು 15ಕ್ಕೇರಿದ್ದಾರೆ. ಆರನೇ ಸ್ಥಾನದಲ್ಲಿದ್ದ ರೇಣುಕಾ ಸಿಂಗ್ ಠಾಕೂರ್ 11ಕ್ಕೆ ಕುಸಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅರುಂಧತಿ ರೆಡ್ಡಿ ನಾಲ್ಕು ಸ್ಥಾನ ಗಳ ಬಡ್ತಿಯೊಂದಿಗೆ 39ನೇ ಶ್ರೇಣಿಗೇರಿದ್ದಾರೆ.