ಬರ್ಮಿಂಗ್‌ಹ್ಯಾಮ್: ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಆಟಗಾರರ ನಡುವಿನ ಟೂರ್ನಿಯಾಗಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾನುವಾರ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಿಗದಿಯಾಗಿದೆ. ಆದರೆ ಇತ್ತೀಚೆಗೆ ಪಹಲ್ಲಾಂನಲ್ಲಿ ಉಗ್ರರು ನಡೆಸಿದ ಭೀಕರ ಹತ್ಯಾಕಾಂಡ ಖಂಡಿಸಿ ಕೆಲ ಭಾರತೀಯ ಆಟಗಾರರು ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್ ಪಾಕ್ ವಿರುದ್ಧ ಪಂದ್ಯ ಆಡಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಉಳಿದಂತೆ ಯುವರಾಜ್ ಸಿಂಗ್, ಶಿಖರ್ ಧವನ್, ಸುರೇಶ್ ರೈನಾ, ವಿನಯ್ ಕುಮಾರ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಪಿಯೂಷ್ ಚಾವ್ಹಾ, ವರುಣ್ ಆಯರೊನ್, ಅಭಿಮನ್ಯು ಮಿಥುನ್, ಸಿದ್ದಾರ್ಥ್ ಕೌಲ್, ಗುರುಕೀರತ್ ಮಾನ್ ಕೂಡಾ ತಂಡದಲ್ಲಿದ್ದಾರೆ. ಇವರು ಕೂಡಾ ಪಾಕ್ ವಿರುದ್ಧ ಪಂದ್ಯವನ್ನು ಬಹಿಷ್ಕರಿಸಬಹುದು ಎನ್ನಲಾಗುತ್ತಿದೆ.