ಮಂಗಳೂರು: ದ.ಕ. ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಆ. 18 ಮತ್ತು 19ರಂದು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕ್ರೀಡಾಕೂಟ ನಡೆಯಲಿದೆ ಎಂದು ಕೋಶಾಧಿಕಾರಿ ಕೃಷ್ಣ ಶೆಣೈ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ, ಈಗಾಗಲೇ ಸುಮಾರು 450 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಸ್ಪರ್ಧೆಯು ಬಾಲಕ ಬಾಲಕಿಯರ 12, 14, 16 ಮತ್ತು 18 ವಯೋಮಿತಿಯಡಿ ನಡೆಯಲಿದ್ದು, ಆ. 18ರಂದು ಸಂಜೆ 3.30ಕ್ಕೆ ಉದ್ಘಾಟನೆ ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ಆಯ್ಕೆಯಾಗುವ ಕ್ರೀಡಾಪಟುಗಳು ಆ. 23ರಿಂದ 26ರವರೆಗೆ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಉಪಾಧ್ಯಕ್ಷ ಸ್ಟೀವನ್ ಪಿ. ಡಯಾಸ್, ಜತೆ ಕಾರ್ಯದರ್ಶಿ ತಾರನಾಥ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಅನಿಲ್ ಆಳ್ವ ಸುಜಿತ್ ಕುಮಾರ್ ಉಪಸ್ಥಿತರಿದ್ದರು.