image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ರೋಜರ್ ಬಿನ್ನಿ ವಜಾ: ರಾಜೀವ್ ಶುಕ್ಲಾ ಹಂಗಾಮಿ ಅಧ್ಯಕ್ಷ?

ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ರೋಜರ್ ಬಿನ್ನಿ ವಜಾ: ರಾಜೀವ್ ಶುಕ್ಲಾ ಹಂಗಾಮಿ ಅಧ್ಯಕ್ಷ?

ನವದೆಹಲಿ : ವಿಶ್ವ ಕ್ರಿಕೆಟ್​ನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐನ (BCCI) ಆಡಳಿತ ವಿಭಾಗದಲ್ಲಿ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಬಿಸಿಸಿಐನ ಹಾಲಿ ಅಧ್ಯಕ್ಷ ರೋಜರ್ ಬಿನ್ನಿ (Roger Binny) ಅವರು ಇಷ್ಟರಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದು, ಅವರ ಬದಲಿಗೆ ಪ್ರಸ್ತುತ ಮಂಡಳಿಯ ಉಪಾಧ್ಯಕ್ಷರಾಗಿರುವ ರಾಜೀವ್ ಶುಕ್ಲಾ (Rajiv Shukla) ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ವಾಸ್ತವವಾಗಿ ರೋಜರ್ ಬಿನ್ನಿ ಅವರು 2022 ರಲ್ಲಿ ಸೌರಭ್ ಗಂಗೂಲಿ ಅವರ ಬದಲಿಗೆ ಅಧ್ಯಕ್ಷ ಹುದ್ದೆಗೇರಿದ್ದರು. ಆದರೀಗ ಅವರಿಗೆ 70 ವರ್ಷ ವಯಸ್ಸಾಗಿದೆ. ಹೀಗಾಗಿ ಅವರು ಶೀಘ್ರದಲ್ಲೇ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಬಹುದು ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಆಗಸ್ಟ್ 27 ರಂದು ರಾಜೀವ್ ಶುಕ್ಲಾ ಅವರ ಅಧ್ಯಕ್ಷತೆಯಲ್ಲಿ ಬಿಸಿಸಿಐ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಟೀಂ ಇಂಡಿಯಾದ ಜೆರ್ಸಿ ಪ್ರಾಯೋಜಕತ್ವವನ್ನು ಡ್ರೀಮ್ 11 ಹಿಂತೆಗೆದುಕೊಂಡಿರುವುದರಿಂದ ಹೊಸ ಪ್ರಾಯೋಜಕತ್ವದ ಬಗ್ಗೆಯೂ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಬಿಸಿಸಿಐ ಸಂವಿಧಾನದ ಪ್ರಕಾರ, ಯಾವುದೇ ಅಧಿಕಾರಿ 70 ವರ್ಷ ವಯಸ್ಸಿನ ನಂತರ ತಮ್ಮ ಹುದ್ದೆಯಲ್ಲಿ ಮುಂದುವರೆಯುವಂತಿಲ್ಲ. ಹೀಗಾಗಿ 70 ವರ್ಷದ ರೋಜರ್ ಬಿನ್ನಿ ಅಧ್ಯಕ್ಷ ಹುದ್ದೆಯಲ್ಲಿ ಉಳಿಯಲು ಅನರ್ಹರಾಗುತ್ತಾರೆ. ವರದಿಗಳ ಪ್ರಕಾರ, 2020 ರಿಂದ ಬಿಸಿಸಿಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವ್ ಶುಕ್ಲಾ ಕೆಲವು ತಿಂಗಳುಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವವರೆಗೆ ಅವರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.ರೋಜರ್ ಬಿನ್ನಿ 1983 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು. ಟೀಂ ಇಂಡಿಯಾದ ಮಾಜಿ ನಾಯಕ ಸೌರಭ್ ಗಂಗೂಲಿ ಬದಲಿಗೆ ಅವರನ್ನು 2022 ರಲ್ಲಿ ಬಿಸಿಸಿಐ ಅಧ್ಯಕ್ಷರನ್ನಾಗಿ ಮಾಡಲಾಯಿತು. 

Category
ಕರಾವಳಿ ತರಂಗಿಣಿ