image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡೆನ್ಮಾರ್ಕ್​ನಲ್ಲಿ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: ಉಡುಪಿಯ ತಂಡಕ್ಕೆ ಚಿನ್ನ

ಡೆನ್ಮಾರ್ಕ್​ನಲ್ಲಿ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: ಉಡುಪಿಯ ತಂಡಕ್ಕೆ ಚಿನ್ನ

ಉಡುಪಿ: ಡೆನ್ಮಾರ್ಕ್​ನಲ್ಲಿ ಈಚೆಗೆ ನಡೆದ 15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಅಶ್ವಿನ್ ಸನಿಲ್ ಮತ್ತು ಕುಮಟಾ ಅಗ್ನಿಶಾಮಕ ದಳದ ಸಿಬ್ಬಂದಿ ರಾಜೇಶ್ ಮಡಿವಾಳ ಚಿನ್ನದ ಪದಕ ಗೆದ್ದಿದ್ದಾರೆ.

ಅಶ್ವಿನ್ ಸನಿಲ್ 83 ಕೆ.ಜಿ ವಿಭಾಗದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನ, 80 ಕೆ.ಜಿ ಪ್ಲಸ್ ದೇಹದಾಢ್ಯ ಸ್ಪರ್ಧೆಯಲ್ಲಿ ಚಿನ್ನ ಮತ್ತು 100 ಮೀಟರ್ ಓಟ ಸ್ಪರ್ಧೆಯಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಕುಮುಟಾದ ರಾಜೇಶ್ ಮಡಿವಾಳ ಇದೀಗ ಉಡುಪಿಯ ಅಗ್ನಿಶಾಮಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 93 ಕೆ.ಜಿ ವಿಭಾಗದ ಪವರ್ ಲಿಫ್ಟಿಂಗ್​ನಲ್ಲಿ ಬೆಳ್ಳಿ, 90 ಪ್ಲಸ್ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಸುಮಾರು 50 ದೇಶಗಳ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ