ಚಿತ್ರ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ದ.ಕ. ಜಿಲ್ಲಾಮಟ್ಟದ ನೆಟ್ಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡುತ್ತಾ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದುವುದಲ್ಲದೆ ಕ್ರೀಡಾಪಟುಗಳಿಗೆ ಮುಂದೆ ಉತ್ತಮ ಉದ್ಯೋಗವೂ ದೊರಕುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾ ಕಾರಂತ ಮಾತನಾಡಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಪ್ರೋತ್ಸಾಹಿಸಲಾಗುತ್ತದೆ ಎಂದರು.
ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಜಯ, ರಾಷ್ಟಮಟ್ಟದ ಕ್ರೀಡಾಪಟು ಪ್ರೇಮನಾಥ ಶೆಟ್ಟಿ, ಎಡಪದವು ಶುಭಕೋರಿದರು. ಎಸ್.ಡಿ.ಎಂ. ಸೆಕೆಂಡರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಸುರೇಶ, ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಅಖಿಲ್ಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ಕೃಷ್ಣಾನಂದ ಉಪಸ್ಥಿತರಿದ್ದರು. ಎಸ್.ಡಿ.ಎಂ. ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಕಿರಣ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ ಧನ್ಯವಾದ ಅರ್ಪಿಸಿದರು. ಗೇರುಕಟ್ಟೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.