ಹೈದರಬಾದ್ : ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡ 5 ವಿಕೆಟ್ ನಷ್ಟಕ್ಕೆ 260 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಟೀಮ್ ಇಂಡಿಯಾಗೆ ಕೊನೆಯ ಇನಿಂಗ್ಸ್ನಲ್ಲಿ ಬರೋಬ್ಬರಿ 549 ರನ್ಗಳ ಕಠಿಣ ಗುರಿ ನೀಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 288 ರನ್ಗಳ ಮುನ್ನಡೆ ಸಾಧಿಸಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಈ ಪಂದ್ಯವನ್ನು ಗೆಲ್ಲಲು ಬರೋಬ್ಬರಿ 549 ರನ್ ಕಲೆಹಾಕಲೇಬೇಕು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸೌತ್ ಆಫ್ರಿಕಾ ದಾಂಡಿಗರು ಪ್ರಥಮ ಇನಿಂಗ್ಸ್ನಲ್ಲಿ ಬರೋಬ್ಬರಿ 489 ರನ್ ಕಲೆಹಾಕಿದ್ದರು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಗಳಿಸಿದ್ದು ಕೇವಲ 201 ರನ್ಗಳು ಮಾತ್ರ. 288 ರನ್ಗಳ ಮುನ್ನಡೆ ಪಡೆದರೂ ಸೌತ್ ಆಫ್ರಿಕಾ ತಂಡ ಭಾರತದ ಮೇಲೆ ಫಾಲೋಆನ್ ಹೇರಿರಲಿಲ್ಲ. ಬದಲಾಗಿ ಮೂರನೇ ದಿನದಾಟದ ಅಂತ್ಯದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ಇದೀಗ ನಾಲ್ಕನೇ ದಿನದಾಟದ ಭೋಜನಾ ವಿರಾಮದ ಬೆನ್ನಲ್ಲೇ 260 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಭಾರತ ತಂಡಕ್ಕೆ ಕೊನೆಯ ಇನಿಂಗ್ಸ್ನಲ್ಲಿ ಬರೋಬ್ಬರಿ 549 ರನ್ಗಳ ಗುರಿ ನೀಡಿದೆ.