image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತ ಮಹಿಳಾ ಕ್ರಿಕೆಟ್ ಪಡೆ ಏಪ್ರಿಲ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ

ಭಾರತ ಮಹಿಳಾ ಕ್ರಿಕೆಟ್ ಪಡೆ ಏಪ್ರಿಲ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ

ಹೈದರಬಾದ್ : ಈ ವರ್ಷ ಮತ್ತೊಂದು ಟಿ20 ವಿಶ್ವಕಪ್ ನಿಗದಿಯಾಗಿದ್ದು, ಭಾರತ ತಂಡವು ಪ್ರಶಸ್ತಿ ಸ್ಪರ್ಧಿಯಾಗಿ ಆ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡವು ಶೀಘ್ರದಲ್ಲೇ 2026 ರ ಮಹಿಳಾ ಟಿ20 ವಿಶ್ವಕಪ್ ಸಿದ್ಧತೆಗಳನ್ನು ಪ್ರಾರಂಭಿಸಲಿದೆ. ಅದರ ಭಾಗವಾಗಿ ಭಾರತ ಮಹಿಳಾ ಪಡೆ ಏಪ್ರಿಲ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಭಾರತ ಮಹಿಳಾ ತಂಡವು ಏಪ್ರಿಲ್ 2026 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದು, ಇದೀಗ ಬಿಸಿಸಿಐ ಕೂಡ ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡೂ ತಂಡಗಳು ಏಪ್ರಿಲ್ 17 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಕಳೆದ ವರ್ಷ ಏಕದಿನ ವಿಶ್ವಕಪ್ ಗೆದ್ದ ನಂತರ ಇದು ಭಾರತದ ಮೂರನೇ ಸರಣಿಯಾಗಿದೆ. ಟೀಂ ಇಂಡಿಯಾ ಡಿಸೆಂಬರ್ 2025 ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡಿತ್ತು. ಇದೀಗ ನಡೆಯುತ್ತಿರುವ ಡಬ್ಲ್ಯುಪಿಎಲ್ ಬಳಿಕ ಫೆಬ್ರವರಿ-ಮಾರ್ಚ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದು, ಅಲ್ಲಿ ಮೂರು ಸ್ವರೂಪಗಳ ಸರಣಿಯನ್ನು ಆಡಲಿದೆ ಎಂದು ಸ್ಪೋರ್ಟ್ಸ್ ಬ್ಯುರೋ ವರದಿ ಮಾಡಿದೆ.

ಆಸ್ಟ್ರೇಲಿಯಾ ಪ್ರವಾಸದ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಕೈಗೊಳ್ಳಲಿದೆ. ಇದೀಗ ಈ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಎಲ್ಲಾ ಐದು ಪಂದ್ಯಗಳು ದಕ್ಷಿಣ ಆಫ್ರಿಕಾದ ಮೂರು ವಿಭಿನ್ನ ಸ್ಥಳಗಳಲ್ಲಿ ನಡೆಯಲಿವೆ. ಎರಡು ಪಂದ್ಯಗಳು ಡರ್ಬನ್‌ನಲ್ಲಿ, ಎರಡು ಪಂದ್ಯಗಳು ಜೋಹಾನ್ಸ್‌ಬರ್ಗ್‌ನಲ್ಲಿ ಮತ್ತು ಒಂದು ಪಂದ್ಯ ಬೆನೋನಿಯಲ್ಲಿ ನಡೆಯಲಿದೆ. ಈ ಪ್ರವಾಸದ ನಂತರ, ಟೀಂ ಇಂಡಿಯಾ ಮೇ ಅಂತ್ಯದಲ್ಲಿ ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಆದಾಗ್ಯೂ, ವಿಶ್ವಕಪ್‌ಗೆ ಮೊದಲು ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ವಿಶ್ವಕಪ್ ಜೂನ್ 12 ರಂದು ಆರಂಭವಾಗಲಿದೆ. ವೇಳಾಪಟ್ಟಿ ಇಂತಿದೆ ಏಪ್ರಿಲ್ 17 - ಮೊದಲ ಟಿ20, ಡರ್ಬನ್, ಏಪ್ರಿಲ್ 19 - ಎರಡನೇ ಟಿ20, ಡರ್ಬನ್, ಏಪ್ರಿಲ್ 22 - 3ನೇ ಟಿ20, ಜೋಹಾನ್ಸ್‌ಬರ್ಗ್, ಏಪ್ರಿಲ್ 25 - 4ನೇ ಟಿ20, ಜೋಹಾನ್ಸ್‌ಬರ್ಗ್, ಏಪ್ರಿಲ್ 27 - ಐದನೇ ಟಿ20, ಬೆನೋನಿ

Category
ಕರಾವಳಿ ತರಂಗಿಣಿ