ಹೈದರಬಾದ್ : ಭಾರತ ತಂಡ ಹಾಲಿ ಟಿ20 ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಸಜ್ಜಾಗುತ್ತಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಭಾರತ ತಂಡ ಸತತ ಎರಡನೇ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಲು ರೆಡಿಯಾಗಿದೆ. ಆದರೆ ದೇಶೀಯ ಕ್ರಿಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಸಮಯದಲ್ಲಿ ಗಾಯಗೊಂಡಿದ್ದ ತಿಲಕ್ ವರ್ಮಾ ಚೇತರಿಸಿಕೊಂಡು ಟಿ20 ವಿಶ್ವಕಪ್ ಆಡಲು ರೆಡಿಯಾಗಿದ್ದಾರೆ. ಆದರೆ, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಈಗಾಗಲೇ ಗಾಯದ ಕಾರಣದಿಂದಾಗಿ ಹೊರಗುಳಿದಿದ್ದಾರೆ. ಈಗ, ವೇಗದ ಬೌಲರ್ ಹರ್ಷಿತ್ ರಾಣಾ ಅವರ ಗಾಯವು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಹೊಸ ತಲೆನೋವಾಗಿದೆ. ಹರ್ಷಿತ್ ರಾಣಾ ಗಾಯಗೊಂಡಿರುವ ಬಗ್ಗೆ ವಿಷಯದ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಆದರೆ, 2026 ರ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿರುವ ಬಗ್ಗೆ ಹಲವು ವರದಿಗಳಾಗಿವೆ. ಇದರ ಬೆನ್ನಲ್ಲೇ ಹರ್ಷಿತ್ ರಾಣಾ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯುತ್ತಾರಾ? ಎಂಬ ಚರ್ಚೆಗಳು ಶುರುವಾಗಿವೆ.