image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕ್ರೀಡಾಸ್ಫೂರ್ತಿ ಮರೆತು ವರ್ತಿಸಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಇದೀಗ ಐಸಿಸಿ ಕ್ರಮ

ಕ್ರೀಡಾಸ್ಫೂರ್ತಿ ಮರೆತು ವರ್ತಿಸಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಇದೀಗ ಐಸಿಸಿ ಕ್ರಮ

ಹೈದರಬಾದ್ : ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮರೆತು ವರ್ತಿಸಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಇದೀಗ ಐಸಿಸಿ (ICC) ಕ್ರಮಕೈಗೊಂಡಿದೆ. ನ್ಯೂಜಿಲೆಂಡ್ ಇನ್ನಿಂಗ್ಸ್ ವೇಳೆ ಸ್ಟ್ರೈಕ್​ನಲ್ಲಿದ್ದ ಡ್ಯಾರೆಲ್ ಮಿಚೆಲ್ ಮೇಲೆ ಬಾಲ್ ಎಸೆದು ಆಕ್ರಮಣಕಾರಿಯಾಗಿ ವರ್ತಿಸಿದ್ದ ಅರ್ಷದೀಪ್​ಗೆ ಐಸಿಸಿ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ವೇತನವನ್ನು ದಂಡವಾಗಿ ವಿಧಿಸುವುದರ ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಿದೆ. ಹೀಗಾಗಿ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದ್ದ ಅರ್ಷದೀಪ್ ಸಿಂಗ್ ಐಸಿಸಿಯಿಂದ ದಂಡನೆಗೆ ಒಳಗಾಗಿ ತಲೆತಗ್ಗಿಸಬೇಕಾಗಿದೆ. ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅನುಚಿತ ಮತ್ತು ಅಪಾಯಕಾರಿ ರೀತಿಯಲ್ಲಿ ಚೆಂಡನ್ನು (ಅಥವಾ ಯಾವುದೇ ಇತರ ಕ್ರಿಕೆಟ್ ವಸ್ತು) ಆಟಗಾರನ ಕಡೆಗೆ ಎಸೆಯುವುದಕ್ಕೆ ಸಂಬಂಧಿಸಿದ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಉಲ್ಲಂಘಿಸಿರುವ ಅರ್ಷದೀಪ್​ಗೆ ದಂಡದ ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ನೀಡಲಾಗಿದೆ.

Category
ಕರಾವಳಿ ತರಂಗಿಣಿ