ಮುಂಬೈ: ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕದ ನೂತನ ಮುಖ್ಯಸ್ಥರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಶರದ್ ಕುಮಾರ್ ನೇಮಕಗೊಂಡಿದ್ದಾರೆ. ಕಳೆದ ವರ್ಷ ಈ ಘಟಕ್ಕೆ ಕೆಕೆ ಮಿಶ್ರಾ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಆದರೆ ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನವೇ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ.
ಅಲ್ಲದೇ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ನಾಲ್ಕು ತಿಂಗಳ ಮೊದಲೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಶರದ್ ಕುಮಾರ್ ಅವರು ನಾಲ್ಕು ವರ್ಷಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು ಎಂಬುದು ಗಮನಾರ್ಹ.
ಶರದ್ ಕುಮಾರ್ ಹರಿಯಾಣ ಕೇಡರ್‌ನ 1979ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, 2013 ರಿಂದ 2017ರ ವರೆಗೆ ಎನ್ಐಎ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ನಂತರ, ಅವರನ್ನು ಕೇಂದ್ರ ಜಾಗೃತ ಆಯೋಗದಲ್ಲಿ ವಿಜಿಲೆನ್ಸ್ ಕಮಿಷನರ್ ಆಗಿ ನೇಮಿಸಲಾಯಿತು. ಅವರು ಜೂನ್ 2018 ರಿಂದ ಏಪ್ರಿಲ್ 2020ರ ವರೆಗೆ ಇದರಲ್ಲಿದ್ದರು.