image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್: ಟೀಮ್ ಇಂಡಿಯಾದಿಂದ ಕಿಂಗ್ ಕೊಹ್ಲಿ ಔಟ್!

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್: ಟೀಮ್ ಇಂಡಿಯಾದಿಂದ ಕಿಂಗ್ ಕೊಹ್ಲಿ ಔಟ್!

ಹೈದರಾಬಾದ್ : ಜೂನ್ 6ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಜೂನ್ 6ರಂದು ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡರೆ, ಜೂನ್ 13, 17 ಹಾಗೂ ಜೂನ್ 20ರಂದು ಏಕದಿನ ಪಂದ್ಯಗಳು ಜರುಗಲಿವೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರನ್ ಮಷಿನ್ ವಿರಾಟ್ ಕೊಹ್ಲಿ ಅವರನ್ನು ಹಲವು ದಿನಗಳ ಬಳಿಕ ಮತ್ತೆ ಭಾರತದ ಜೆರ್ಸಿಯಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದರು. ಆದರೆ ಪ್ರಕಟವಾದ ತಂಡದಲ್ಲಿ ಕೊಹ್ಲಿ ಹೆಸರು ಇಲ್ಲದಿರುವುದು ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ.

ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡದಿರುವ ಕುರಿತು ಈಗ ಅಸಲಿ ಕಾರಣ ಬಹಿರಂಗವಾಗಿದೆ. ಐಪಿಎಲ್ ಫೈನಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗಾಯಕ್ಕೊಳಗಾಗಿದ್ದು, ಈ ಗಾಯದ ಸಮಸ್ಯೆಯಿಂದಾಗಿ ಅವರು ಕನಿಷ್ಠ ಎರಡು ವಾರಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಜೂನ್ 20ರಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯದ ವೇಳೆಗೆ ಕೊಹ್ಲಿ ಗಾಯದಿಂದ ಸುಧಾರಿಸಿಕೊಳ್ಳುವ ಸಾಧ್ಯತೆ ಇದ್ದರೂ, ಬಿಸಿಸಿಐ ಆಯ್ಕೆಗಾರರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಕೊಹ್ಲಿ ಆತುರಪಟ್ಟು ಕಣಕ್ಕಿಳಿಯುವುದು ಬೇಡ, ಸಂಪೂರ್ಣವಾಗಿ ವಿಶ್ರಾಂತಿ ಪಡೆದು ಸುಧಾರಿಸಿಕೊಳ್ಳಲಿ ಎಂದು ಆಯ್ಕೆ ಸಮಿತಿ ಸಲಹೆ ನೀಡಿದೆ ಎಂದು ಎಕ್ಸ್‌ಪ್ರೆಸ್ ಸ್ಪೋರ್ಟ್ಸ್ ವರದಿ ಮಾಡಿದೆ.

ಆದರೆ ಬಿಸಿಸಿಐನ ಈ ನಿರ್ಧಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಬಿಸಿಸಿಐ ಬೇಕಂತಲೇ ವಿರಾಟ್ ಕೊಹ್ಲಿಯನ್ನು ಕಡೆಗಣಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು, "ಇದೆಲ್ಲವೂ ವಿಶ್ರಾಂತಿಯ ಹೆಸರಿನಲ್ಲಿ ನಡೆಯುತ್ತಿರುವ ನಾಟಕ. ವಿರಾಟ್ ಕೊಹ್ಲಿ ಅವರು ಸಚಿನ್ ತೆಂಡೂಲ್ಕರ್ ಅವರ 100 ಅಂತರರಾಷ್ಟ್ರೀಯ ಶತಕಗಳ ದಾಖಲೆಯನ್ನು ಮುರಿದುಬಿಡುತ್ತಾರೆ ಎಂಬ ಭಯದಿಂದ ಅವರಿಗೆ ಬೇಕಂತಲೇ ವಿಶ್ರಾಂತಿ ನೀಡಲಾಗುತ್ತಿದೆ" ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಮತ್ತೊಂದೆಡೆ, ಕೊಹ್ಲಿ ಅವರಿಗೆ ವಯಸ್ಸಾಗುತ್ತಿರುವುದರಿಂದ ತಂಡಕ್ಕೆ ಅವರ ಅವಶ್ಯಕತೆ ಇಲ್ಲ, ಅದಕ್ಕಾಗಿಯೇ ಅವರು ಫಿಟ್ ಆದರೂ ಕೊನೆಯ ಪಂದ್ಯಕ್ಕೆ ಆಯ್ಕೆ ಮಾಡುತ್ತಿಲ್ಲ ಎಂದು ಕೆಲವರು ವಾದಿಸುತ್ತಿದ್ದಾರೆ. ಒಟ್ಟಿನಲ್ಲಿ ಕೊಹ್ಲಿ ಸರಣಿಯಿಂದ ಹೊರಬಿದ್ದಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

Category
ಕರಾವಳಿ ತರಂಗಿಣಿ