ಸ್ಪೇನ್ : ಸ್ಪೇನ್ ದೇಶದ ದಿಗ್ಗಜ ಆಟಗಾರ ರಾಫೆಲ್ ನಡಾಲ್ ಅವರು ಇಂದು ಟೆನಿಸ್‌ಗೆ ನಿವೃತ್ತಿ ಘೋಷಿಸಿದ್ದು, ಈ ಕುರಿತು ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿರುವ ಅವರು, "ಜೀವನದಲ್ಲಿ ಪ್ರತಿಯೊಂದಕ್ಕೂ ಪ್ರಾರಂಭ ಮತ್ತು ಅಂತ್ಯವಿರುತ್ತದೆ. ಅದರಂತೆ ನನ್ನ ಟೆನಿಸ್ ವೃತ್ತಿಜೀವನವನ್ನು ಕೊನೆಗೊಳಿಸಲು ಸರಿಯಾದ ಸಮಯ ಬಂದಿದೆ ಎಂದು ಭಾವಿಸಿದ್ದೇನೆ. ಡೇವಿಸ್ ಕಪ್ ಫೈನಲ್ ನನ್ನ ವೃತ್ತಿಜೀವನದ ಕೊನೆಯ ಪಂದ್ಯಾವಳಿಯಾಗಿದ್ದು, ಇದರಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಲು ಉತ್ಸುಕನಾಗಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
22 ಬಾರಿ ಪ್ರತಿಷ್ಟಿತ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದಿರುವ ನಡಾಲ್, ಈ ವರ್ಷದ ನವೆಂಬರ್‌ನಲ್ಲಿ ಮಲಗಾದಲ್ಲಿ ನಡೆಯಲಿರುವ ಡೇವಿಸ್ ಕಪ್ ತಮ್ಮ ಅಂತಿಮ ಟೆನಿಸ್ ಟೂರ್ನಿ ಎಂದು ತಿಳಿಸಿದ್ದಾರೆ. ನವೆಂಬರ್ 19ರಿಂದ 21ರವರೆಗೆ ನಡೆಯಲಿರುವ ಡೇವಿಸ್ ಕಪ್ನ ಕ್ವಾರ್ಟರ್ ಫೈನಲ್‌ನಲ್ಲಿ ನಡಾಲ್, ನೆದರ್ಲೆಂಡ್ಸ್ ಸ್ಪರ್ಧಿಯನ್ನು ಎದುರಿಸಲಿದ್ದಾರೆ.