ಮಂಗಳೂರು: ಜೂ.17 ರಿಂದ 21 ರ ವರೆಗೆ ಮಧ್ಯಪ್ರದೇಶದ ಅಮೇಚೂರ್ ಸ್ಪೋರ್ಟ್ಸ್ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಮಧ್ಯಪ್ರದೇಶದ ಇಂದೋರ್ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ ವಾಕೋ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಐಕೆಎಂಎನ ಅತ್ಯುತ್ತಮ ಪ್ರದರ್ಶನ ನೀಡಿ ಐತಿಹಾಸಿಕ ಸಾಧನೆ ಮಾಡಿದೆ ಎಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸೇಷೊಯನ್ ನ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈ ಕ್ರೀಡಾಕೂಟದಲ್ಲಿ 2 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದು, ರಾಜ್ಯದಿಂದ 58 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯಿಂದ 15 ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಗೆ 11 ಚಿನ್ನದ ಪದಕ, 2 ಬೆಳ್ಳಿಯ ಪದಕ ಹಾಗೂ 9 ಕಂಚಿನ ಪದಕಗಳನ್ನು ಜಯಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯಕ್ಕೆ 20 ಚಿನ್ನದ ಪದಕಗಳು ಬಂದಿದ್ದು, ಇದರಲ್ಲಿ 11 ಪದಕಗಳು ಜಿಲ್ಲೆಗೆ ಬಂದಿದ್ದು, ಇದೊಂದು ಐತಿಹಾಸಿಕ ದಾಖಲೆಯಾಗಿದೆ ಎಂದು ಹೇಳಿದರು.
ಹಾಗೆಯೇ ಮೇ 30 ರಿಂದ ಜೂ.3 ರವರೆಗೆ ವಾಕೋ ಇಂಡಿಯಾ ಜೂನಿಯರ್ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿಯೂ ಐಕೆಎಂಎ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದು, 3 ಚಿನ್ನದ ಪದಕ, 1 ಬೆಳ್ಳಿ ಪದಕ ಹಾಗೂ 3 ಕಂಚಿನ ಪದಕಗಳನ್ನು ಗೆದ್ದುಕೊಂಡು ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಐಕೆಎಂಎಯ ಮುಖ್ಯ ಶಿಕ್ಷಕ ನಿತಿನ್ ಎನ್. ಸುವರ್ಣ, ಶಿಕ್ಷಕರಾದ ಸಂಪತ್ ಕುಮಾರ್, ಶಿವಪ್ರಸಾದ್, ಸಹ ಶಿಕ್ಷಕರಾದ ರಾಜೇಶ್ ಕೆ., ಅವ್ನಿ, ಅನ್ಶಿ ಉಪಸ್ಥಿತರಿದ್ದರು.