image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ

ಮಂಗಳೂರಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ವತಿಯಿಂದ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಮಂಗಳೂರಿನ ಪಡೂಕೋಡಿ ಕೊಟ್ಟಾರದಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಆರಂಭಗೊಂಡ ಈ ಕ್ರೀಡಾಕೂಟಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಚಾಲನೆ ನೀಡಿ, ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಂತ ತೆರೇಸಾ ಶಾಲೆಯ ಸಂಚಾಲಕರಾದ ಸಿಸ್ಟರ್ ಶೈಲಾ ಅವರು ಮಾತನಾಡಿ, ಸೋಲು-ಗೆಲುವಿನ ಆಚೆಗೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಚಾಂಪಿಯನ್‌ಗಳೇ ಆಗಿರುತ್ತಾರೆ. ಕ್ರೀಡಾಪಟುಗಳು ಸತತ ಪ್ರಯತ್ನದ ಮೂಲಕ ಯಶಸ್ಸನ್ನು ಸಾಧಿಸಬೇಕು. ಕೇವಲ ಆಟದಲ್ಲಿ ಗೆಲ್ಲುವುದಷ್ಟೇ ಅಲ್ಲದೆ, ಉತ್ತಮ ಚಾರಿತ್ರ್ಯವನ್ನು ಮೈಗೂಡಿಸಿಕೊಂಡು ಜೀವನದಲ್ಲಿಯೂ ಗೆಲ್ಲುವುದು ಮುಖ್ಯ ಎಂದು ಆಟಗಾರರನ್ನು ಪ್ರೇರೇಪಿಸಿದರು. ಇದೇ ವೇಳೆ ಸಂತ ತೆರೇಸಾ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಲೂರ್ಡ್ಸ್ ಅವರು ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವಂತೆ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆಯ ಅಧ್ಯಕ್ಷರಾದ ಗೌತಮ್ ಶೆಟ್ಟಿ ಅವರು ಆಗಮಿಸಿದ ಎಲ್ಲಾ ಗಣ್ಯರಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ಪಂದ್ಯಾವಳಿಯ ಮೊದಲ ದಿನ ಮಹಿಳೆಯರ ಸಿಂಗಲ್ಸ್ ಪಂದ್ಯಗಳೊಂದಿಗೆ ಆರಂಭಗೊಂಡು, ನಂತರ 19 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗ, ಪುರುಷರ ಸಿಂಗಲ್ಸ್ ಹಾಗೂ ಎನ್‌ಎಂಎಸ್ (NMS) ಪಂದ್ಯಗಳು ಯಶಸ್ವಿಯಾಗಿ ಜರುಗಿದವು.

Category
ಕರಾವಳಿ ತರಂಗಿಣಿ